HomeLatest NewsBREAKING : 'ಜಾತಿ ಗಣತಿ’ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ...

BREAKING : ‘ಜಾತಿ ಗಣತಿ’ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ : CM ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಜಾತಿ ಗಣತಿ’ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025ರ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು.
  • ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
  • ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.
  • ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು.
  • ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಲಾಗುವುದು.
  • ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.
  • ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.
  • ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular