HomeKarnatakaಗೃಹ ಬಳಕೆ ಸಿಲಿಂಡರ್ ಗ್ಯಾಸ್ ವಾಣಿಜ್ಯ ಸಿಲಿಂಡರ್ ಗಳಿಗೆ ತುಂಬಿಸಿದಲ್ಲಿ ಕಾನೂನು ಕ್ರಮ

ಗೃಹ ಬಳಕೆ ಸಿಲಿಂಡರ್ ಗ್ಯಾಸ್ ವಾಣಿಜ್ಯ ಸಿಲಿಂಡರ್ ಗಳಿಗೆ ತುಂಬಿಸಿದಲ್ಲಿ ಕಾನೂನು ಕ್ರಮ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಹೇರಳವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಆತಂಕದಿಂದ ಅತಿಯಾಗಿ ಗ್ಯಾಸ್ ಬುಕಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ವ್ಯವಸ್ಥೆಯ ಮೇಲೆ ಒತ್ತಡ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಡುಗೆ ಅನಿಲ ಪೂರೈಕೆದಾರರು ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 38 ಐಒಸಿಎಲ್, ಹೆಚ್.ಪಿ.ಸಿ.ಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಅಡಿಯಲ್ಲಿ ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿದ್ದು, ಸಾಕಷ್ಟು ದಾಸ್ತಾನು ಲಭ್ಯವಿದೆ. ಆದರೆ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿರುವುದಿಲ್ಲ. ಗೃಹ ಉಪಯೋಗಿ ಅಡುಗೆ ಅನಿಲ್ ಸಿಲಿಂಡರ್ ಅನ್ನು ಬುಕ್ ಮಾಡಿದ 25 ದಿನದೊಳಗೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು

ಮನೆಯ ಬಳಕೆಯ ಸಿಲಿಂಡರ್ ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರಸ್ತೆ ಬದಿಯ ಗಾಡಿಗಳು ಅಥವಾ ವಾಣಿಜ್ಯ ಮಳಿಗೆಗಳಲ್ಲಿ ಗೃಹ ಬಳಕೆಯ ಸಿಲಿಂಡರ್ ಕಂಡುಬಂದಲ್ಲಿ ತಕ್ಷಣವೇ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಸೇವೆಗಳಾದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು, ಶಾಲೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಅಡುಗೆ ಅನಿಲದ ಕೊರತೆಯಾಗದಂತೆ ವಿತರಕರು ಸರಬರಾಜು ಮಾಡುವಂತೆ ಸೂಚನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಪದವಿ ಪೂರ್ವ ಪರೀಕ್ಷೆ ನಡೆಯುತ್ತಿದ್ದು, ನಂತರ ಎಸ್.ಎಸ್.ಎಲ್.ಸಿ ಮತ್ತು ಪದವಿ ಪರೀಕ್ಷೆಗಳು ನಡೆಯುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

ವಸತಿ ನಿಲಯಗಳಲ್ಲಿ ಗ್ಯಾಸ್ ಉಳಿತಾಯ ಮಾಡುವ ನಿಟ್ಟಿನಲ್ಲಿ ಚಪಾತಿ, ಪೂರಿ ದೊಸೆಯಂತಹ ಅಡುಗೆಗಳನ್ನು ತಾತ್ಕಾಲಿಕ ಮುಂದೂಡಿ, ಬದಲಿಗೆ ಉಪ್ಪಿಟ್ಟು, ಫಲಾವ್, ತರಕಾರಿ ಬಾತ್, ಅನ್ನ, ತರಕಾರಿ ಸಂಬಾರು ಮಾಡುವಂತೆ ಸಲಹೆ ನೀಡಿದರು.

ಸಿಲಿಂಡರ್ ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು. ಗ್ಯಾಸ್ ದಾಸ್ತಾನುಗಳಿಗೆ ಭೇಟಿ ನೀಡಿ ದಾಸ್ತಾನು ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ. ಮಾತನಾಡಿ, ಗೃಹ ಉಪಯೋಗಿ ಅನಿಲ ಸಿಲಿಂಡರ್‍ಗಳನ್ನು ವಾಣಿಜ್ಯ ಬಳಕೆ ಸಿಲಿಂಡರ್ ಗಳಿಗೆ ತುಂಬಿಸುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಮತ್ತು ಇಂತಹ ಸಂದರ್ಭದಲ್ಲಿ ಸಿಲಿಂಡರ್ ಗಳು ಕಳ್ಳತನವಾಗುವ ಸಾಧ್ಯತೆ ಇರುತ್ತದೆ. ಆದುದರಿಂದ ಸಾರ್ವಜನಿಕರು ಜಾಗೃತಿಯಿಂದ ಇರುವಂತೆ ತಿಳಿಸಿದರು.

ಗ್ರಾಹಕರು ಇ-ಕೆವೈಸಿ ಮಾಡಿಸಿ ಬುಕಿಂಗ್‍ನ್ನು ಗ್ರಾಹಕರ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವ ಮೂಲಕ ಬುಕಿಂಗ್ ಮಾಡಬೇಕು. ಬುಕಿಂಗ್ ಮಾಡಿದ 25 ದಿನಗಳ ನಂತರ ಸಿಲಿಂಡರ್ ಮನೆಗೆ ಬರಲಿದ್ದು ಸಿಲಿಂಡರ್ ವಿತರಣೆ ಮಾಡಿದಾಗ ಗ್ರಾಹಕರ ಸಂಖ್ಯೆಗೆ ಒಟಿಪಿ ಬರಲಿದೆ. ಪ್ರಸ್ತುತ 38 ವಿವಿಧ ಗ್ಯಾಸ್ ಕಂಪನಿಯಲ್ಲಿ ಪ್ರಸ್ತುತ ಅಂದಾಜು 7 ಲಕ್ಷ ಮನೆ ಬಳಕೆ ಸಿಲಿಂಡರ್‍ಗಳ ಸಂಪರ್ಕವಿದೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಆಹಾರ ನಿರೀಕ್ಷಕರು, ಅನಿಲ ಪೂರೈಕೆ ಮಾಡುವ ಎಜೆನ್ಸಿಗಳ ಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular