HomeLatest Newsಹೆಚ್ಚುವರಿಯಾಗಿ 3352 ಕೋಟಿ ರೂ. ವೆಚ್ಚ ಮಾಡಲು ಪೂರಕ ಅಂದಾಜಿಗೆ ವಿಧಾನಸಭೆ ಒಪ್ಪಿಗೆ

ಹೆಚ್ಚುವರಿಯಾಗಿ 3352 ಕೋಟಿ ರೂ. ವೆಚ್ಚ ಮಾಡಲು ಪೂರಕ ಅಂದಾಜಿಗೆ ವಿಧಾನಸಭೆ ಒಪ್ಪಿಗೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 3352.57 ಕೋಟಿ ರೂ. ವೆಚ್ಚ ಮಾಡಲು ಅವಕಾಶ ಕಲ್ಪಿಸುವ ಮೊದಲ ಕಂತಿನ ಪೂರಕ ಅಂದಾಜುಗಳಿಗೆ ವಿಧಾನಸಭೆಯಲ್ಲಿ ಗುರುವಾರ ಒಪ್ಪಿಗೆ ನೀಡಲಾಗಿದೆ.

ವಿಧಾನಸಭಾ ಅಧಿವೇಶನದಲ್ಲಿ ಪೂರಕ ಅಂದಾಜು ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಪೂರಕ ಅಂದಾಜು ವೆಚ್ಚವು ಬಜೆಟ್ ಗಾತ್ರದ ಶೇಕಡ 0.78ರಷ್ಟು ಇದೆ. ತೆರಿಗೆ ವಸೂಲಾತಿ ಹೆಚ್ಚಳ, ಮರು ಹೊಂದಾಣಿಕೆ ಮೂಲಕ ಅಗತ್ಯ ಬಿದ್ದರೆ ಸಾಲ ಮಾಡಿ 3352.57 ಕೋಟಿ ರೂ. ಹೊಂದಿಸಿ ವೆಚ್ಚ ಮಾಡುತ್ತೇವೆ ಎಂದು ಹೇಳಿದ್ದಾರೆ.

ಪ್ರತಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ನಡೆದ ಸಾಧನಾ ಸಮಾವೇಶಕ್ಕೆ 10 ಕೋಟಿ ರೂ., ಕೇರಳದ ವಯನಾಡಿನಲ್ಲಿ ಉಂಟಾದ ಪ್ರವಾಹದಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಲು 10 ಕೋಟಿ ರೂಪಾಯಿ ನೆರವು ನೀಡಲು ಪೂರಕ ಅಂದಾಜಿನಲ್ಲಿ ಅವಕಾಶ ಕಲ್ಪಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಪಕ್ಷದಿಂದ ವೆಚ್ಚ ಮಾಡಬೇಕು. ಸರ್ಕಾರದ ವೆಚ್ಚದಲ್ಲಿ ಇದನ್ನು ಸೇರಿಸಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular