HomeLatest Newsನಾಳೆಯಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ನಾಳೆಯಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ.

ಆಗಸ್ಟ್ 11 ರಿಂದ 22ರ ವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿವೆ. ಸುಗಮ ಕಲಾಪಕ್ಕೆ ಮತ್ತು ಪ್ರತಿ ಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕೂಡ ಸಜ್ಜಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಸೇರಿ ಮೂರು ದಿನ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ. ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ವಿಪಕ್ಷಗಳು ಸಜ್ಜಾಗಿವೆ.  

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular