HomeKarnatakaವಿಧಾನ ಪರಿಷತ್ ಚುನಾವಣೆ: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಐದನೇ ಬಾರಿ ಗೆದ್ದ ಬಿಜೆಪಿ ಅಭ್ಯರ್ಥಿ ಶಶೀಲ್...

ವಿಧಾನ ಪರಿಷತ್ ಚುನಾವಣೆ: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಐದನೇ ಬಾರಿ ಗೆದ್ದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ

ಕಲಬುರಗಿ: ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ 5ನೇ ಬಾರಿಗೆ ಜಯಗಳಿಸಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು, ಮೊದಲ ಸುತ್ತಿನಿಂದಲೇ ಶಶೀಲ್ ನಮೋಶಿ ಭಾರಿ ಮುನ್ನಡೆ ಕಾಯ್ದುಕೊಂಡರು. 14 ಟೇಬಲ್ ಗಳಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ ಸುತ್ತಿನಲ್ಲಿ 14,001 ಮತಗಳ ಎಣಿಕೆ ನಡೆಯಿತು. 13,183 ಮತಗಳು ಸಿಂಧುವಾಗಿದ್ದು, 818 ಮತಗಳು ಅಸಿಂಧುವಾಗಿದ್ದವು.

ಪ್ರಾಶಸ್ತ್ಯದ ಮತಗಳ ಎಣಿಕೆಯ ಮೊದಲ ಸುತ್ತಿನ ಕೊನೆಯಲ್ಲಿ ಸುಶೀಲ್ ನಮೋಶಿ 7243 ಮತ ಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು 5714 ಮತ ಪಡೆದರು. ಅವರಿಗಿಂತ 1529 ಮತಗಳಿಂದ ಶಶಿಲ್ ನಮೋಶಿ ಮುನ್ನಡೆ ಸಾಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡನೇ ಸುತ್ತಿನಲ್ಲಿ ಶಶೀಲ್ ನಮೋಶಿ 7288 ಮತಗಳನ್ನು ಪಡೆಯುವ ಮೂಲಕ ಒಟ್ಟು 14,531 ಮತಗಳನ್ನು ಪಡೆದರೆ. ಶರಣಪ್ಪ ಮಟ್ಟೂರು 3232 ಮತ ಗಳಿಂದ ಹಿಂದುಳಿದರು. ಶಶಿಲ್ ನಮೋಶಿ ಗೆಲುವು ಸಾಧಿಸಿದ್ದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದ್ದಾರೆ

ಈ ಮೂಲಕ ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು 5ನೇ ಬಾರಿಗೆ ಭರ್ಜರಿ ಜಯಗಳಿಸಿದ್ದಾರೆ.

ಅಕ್ಟೋಬರ್ 27, 2026 ರಂದು ನಡೆದ ಮತ ಎಣಿಕೆಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿ, ಕಾಂಗ್ರೆಸ್‌ನ ಶರಣಪ್ಪ ಮಟ್ಟೂರು ವಿರುದ್ಧ 3,232 ಮತಗಳ ಭಾರಿ ಅಂತರದ ಮುನ್ನಡೆಯೊಂದಿಗೆ ವಿಜಯಶಾಲಿಯಾಗಿದ್ದಾರೆ.

ಪ್ರಮುಖ ವಿವರಗಳು:

• ಒಟ್ಟು ಮತಗಳು: ಎರಡನೇ ಸುತ್ತಿನ ಅಂತ್ಯಕ್ಕೆ ಶಶೀಲ್ ನಮೋಶಿ ಅವರು ಒಟ್ಟು 14,531 ಮತಗಳನ್ನು ಪಡೆದರು.

• ಸತತ 5ನೇ ಗೆಲುವು: ಅವರು ಈ ಕ್ಷೇತ್ರದಿಂದ 1996, 2002, 2008 ಮತ್ತು 2020 ರ ಚುನಾವಣೆಯಲ್ಲೂ ಗೆದ್ದು ಬಂದಿದ್ದು, ಇದೀಗ 5ನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ (MLC) ಆಯ್ಕೆಯಾಗಿದ್ದಾರೆ.

• ಕ್ಷೇತ್ರದ ವ್ಯಾಪ್ತಿ: ಈ ಕ್ಷೇತ್ರವು ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದೆ.

ಕ್ಷೇತ್ರದಲ್ಲಿ ಒಟ್ಟು 34,784 ಮತದಾರರಿದ್ದು, ಅವರಲ್ಲಿ 30,250 ಮಂದಿ ಮತ ಚಲಾಯಿಸಿದ್ದರು. ಮೊದಲ ಸುತ್ತಿನಲ್ಲಿ ಒಟ್ಟು 14,001 ಮತಗಳನ್ನು ಎಣಿಕೆ ಮಾಡಲಾಗಿತ್ತು. ಈ ಪೈಕಿ 13,183 ಮತಗಳು ಸಿಂಧುವಾಗಿದ್ದು, 818 ಮತಗಳು ತಿರಸ್ಕೃತಗೊಂಡಿದ್ದವು.

ಐದನೇ ಬಾರಿಗೆ ಆಯ್ಕೆ

ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಹಿರಿಯ ನಾಯಕ ಶಶೀಲ್ ಜಿ.ನಮೋಶಿ ಅವರು ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಐದನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಕಲಬುರಗಿಯ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಅಧ್ಯಕ್ಷರಾಗಿರುವ ನಮೋಶಿ ಅವರು, ಶಿಕ್ಷಕರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು, ಶಿಕ್ಷಣ ಕ್ಷೇತ್ರದ ಸಮಸ್ಯೆಗಳು, ಶಿಕ್ಷಕರ ಹಕ್ಕುಗಳ ರಕ್ಷಣೆ, ಹಳೆ ಪಿಂಚಣಿ ಯೋಜನೆ(ಒಪಿಎಸ್‌) ಜಾರಿ ಹಾಗೂ ಸಂವಿಧಾನದ 371(ಜೆ) ವಿಧಿಯ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ವಿಚಾರಗಳ ಕುರಿತು ಧ್ವನಿ ಎತ್ತುತ್ತಾ ಬಂದಿದ್ದಾರೆ.

ರಾಜಕೀಯ ಹಿನ್ನೆಲೆ :

1956ರ ಸೆ.21ರಂದು ಕಲಬುರಗಿಯಲ್ಲಿ ಜನಿಸಿದ ಶಶೀಲ್ ಜಿ. ನಮೋಶಿ ಅವರು ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಮಾಜಿ ಶಾಸಕ ದಿವಂಗತ ಗಂಗಾಧರ ನಮೋಶಿ ಅವರ ಪುತ್ರರಾಗಿರುವ ಅವರು, 1990-91ರಲ್ಲಿ ಗುಲ್ಬರ್ಗಾ ಮಹಾನಗರ ಪಾಲಿಕೆಯ ಉಪಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ.

ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ 1996-2002, 2002-2008 ಹಾಗೂ 2008-2014ರ ಅವಧಿಯಲ್ಲಿ ಸತತವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ವಿರುದ್ಧ ಸೋಲು ಕಂಡಿದ್ದರು. ಬಳಿಕ 2020ರಲ್ಲಿ ನಡೆದ ಚುನಾವಣೆಯಲ್ಲಿ ಮಟ್ಟೂರ ಅವರನ್ನು ಸೋಲಿಸಿ ಮತ್ತೆ ವಿಧಾನ ಪರಿಷತ್‌ ಪ್ರವೇಶಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular