HomeLatest Newsಅಮೆರಿಕದ ಶಾಸಕಾಂಗ ಶೃಂಗದಲ್ಲಿ ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರು ಭಾಗಿ

ಅಮೆರಿಕದ ಶಾಸಕಾಂಗ ಶೃಂಗದಲ್ಲಿ ಸಭಾಪತಿ ಹೊರಟ್ಟಿ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯರು ಭಾಗಿ

ಬೆಂಗಳೂರು: ಅಮೆರಿಕದ ಬೋಸ್ಟನ್ ನಗರದಲ್ಲಿ ಆಗಸ್ಟ್ 4ರಿಂದ 6ರವರೆಗೆ ಶಾಸಕಾಂಗ ಶೃಂಗಸಭೆ -2025 ನಡೆಯಲಿದ್ದು, ರಾಜ್ಯ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗವಹಿಸಲಿದ್ದಾರೆ,

ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಶೃಂಗದಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ಧಿಗಳು ಭಾಗವಹಿಸಲಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಶೃಂಗಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನಸಭೆಗಳ ಪಕ್ಷತೀತ ನಿರ್ವಹಣೆ, ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದ ನಡೆಯಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಶೃಂಗದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಭಾ ನಾಯಕ ಎನ್.ಎಸ್. ಬೋಸರಾಜು, ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮ್ಮದ್, ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಬಲ್ಕಿಶ್ ಬಾನು, ಹೇಮಲತಾ ನಾಯಕ್, ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular