HomeLatest Newsವಿಧಾನಮಂಡಲ ಅಧಿವೇಶನ ಎರಡು ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ವಿಧಾನಮಂಡಲ ಅಧಿವೇಶನ ಎರಡು ದಿನ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಇದುವರೆಗೆ ಮನರೇಗಾ ವಿಶೇಷ ಚರ್ಚೆಗೆ ಅವಕಾಶ ಸಿಗದ ಕಾರಣ ಅಧಿವೇಶನವನ್ನು ಫೆಬ್ರವರಿ 2ರಿಂದ ಎರಡು ದಿನಗಳ ಕಾಲ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ನರೇಗಾ ವಿಶೇಷ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿ, ನರೇಗಾ ಯೋಜನೆಯ ಬಗ್ಗೆ ಚರ್ಚಿಸಲು ನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ತಂದಿರುವ ಕೇಂದ್ರದ ವಿರುದ್ಧ ನಿರ್ಣಯ ಅಂಗೀಕರಿಸಲು ಸದನದಲ್ಲಿ ಸಮಯವೇ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಅಧಿವೇಶನವನ್ನು ಎರಡು ದಿನ ವಿಸ್ತರಿಸಲಾಗುವುದು. ಫೆಬ್ರವರಿ 2 ಮತ್ತು 3 ರಂದು ವಿಶೇಷವಾಗಿ ಮನರೇಗಾ ಚರ್ಚೆ ನಡೆಸಲಾಗುವುದು/ ಈ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

 ವಿಧಾನಪರಿಷತ್ ಸದಸ್ಯರು, ವಿಧಾನಸಭೆ ಸದಸ್ಯರು ಉಭಯ ಸದನಗಳಲ್ಲಿ ಕಡ್ಡಾಯವಾಗಿ ನರೇಗಾ ಚರ್ಚೆಯಲ್ಲಿ ಭಾಗವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular