HomeKarnatakaಅರವಳಿಕೆ ನೀಡುವಾಗ ಅರಣ್ಯ ಸಿಬ್ಬಂದಿ ಮೇಲೆಯೇ ಭೀಕರ ದಾಳಿ ನಡೆಸಿದ ಚಿರತೆ

ಅರವಳಿಕೆ ನೀಡುವಾಗ ಅರಣ್ಯ ಸಿಬ್ಬಂದಿ ಮೇಲೆಯೇ ಭೀಕರ ದಾಳಿ ನಡೆಸಿದ ಚಿರತೆ

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡಲು ಕರೆದೊಯ್ಯಲೆಂದು ಅರವಳಿಗೆ ನೀಡಲು ಮುಂದಾದ ಅರಣ್ಯ ಸಿಬ್ಬಂದಿಯ ಮೇಲೆಯೇ ಚಿರತೆ ಭೀಕರವಾಗಿ ದಾಳಿ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನದೆದಿದೆ.

ದಾವಣಗೆರೆ ತಾಲೂಕಿನ ಆನಗೋಡ ಬಳಿ ಈ ಘಟನೆ ನಡೆದಿದೆ. ತಡರಾತ್ರಿ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಚಿರತೆ ರಸ್ತೆ ಪಕ್ಕದ ಚರಂಡಿ ಬಳಿ ಅವಿತು ಕುಳಿತಿತ್ತು. ವಿಷಯ ತಿಳಿದ ಅರಣ್ಯ ಸಿಬ್ಬಂದಿಗಳು ಚಿರತೆ ಸೆರೆ ಕಾರ್ಯಾಚರಣೆಗೆ ಹಂಪಿ ಹಾಗೂ ಚಿತ್ರದುರ್ಗದಿಂದ ಸಿಬ್ಬಂದಿಗಳನ್ನು ಕರೆಸಿ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಗೆ ಮುಂದಾಗಿದ್ದಾರೆ. ಅರವಳಿಕೆ ನೀಡಲು ಮುಂದಾದ ವೇಳೆ ಏಕಾಏಕಿ ಸಿಬ್ಬಂದಿಗಳ ಮೇಲೆಯೇ ಚಿರತೆ ದಾಳಿ ನಡೆಸಿದೆ. ಒಮ್ಮೆ ಅರವಳಿಕೆ ನೀಡುತ್ತಿದ್ದಂತೆ ಕೊಂಚ ಮಂಕಾದ ಚಿರತೆಯನ್ನು ಸೆರೆ ಹಿಡಿಯಲೆಂದು ಅರಣ್ಯ ಸಿಬ್ಬಂದಿಗಳು ಮುಂದಾಗಿದ್ದಾರೆ. ಈ ವೇಳೆ ಒಮ್ಮೆಲೆ ಎದ್ದ ಚಿರತೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ ಉಳಿದ ಸಿಬ್ಬಂದಿಗಳು ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ಆದರೆ ಓರ್ವ ಸಿಬ್ಬಂದಿ ಮಾತ್ರ ಚಿರತೆ ಕೈಗೆ ಸಿಲುಕಿದ್ದಾರೆ. ಸಿಬ್ಬಂದಿಯ ಮೇಲೆ ಎಗರಿದ ಚಿರತೆ ಆತನನ್ನ್ಉ ನೆಲಕ್ಕಪ್ಪಳಿಸಿದೆ. ಈ ವೇಳೆ ಉಳಿದ ಸಿಬ್ಬಂದಿಗಳು ಸಾರ್ವಜನಕಿರು ಜೋರಾಗಿ ಕೂಗಿ ಚಿರತೆ ನಿಯಂತ್ರಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಸಿಬ್ಬಂದಿಯ ಮೇಲೆ ದಾಳಿ ನಡೆಸಿ ಪರಚಿದೆ. ಆದಾಗ್ಯೂ ಸಿಬ್ಬಂದಿ ಚಿರತೆ ಕೈಯಿಂದ ತಪ್ಪಿಸಿಕೊಂಡು ಬಚಾವ್ ಆಗಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬಳಿಕ ಚಿರತೆಗೆ ಮತ್ತೊಂದು ಅರವಳಿಕೆ ನೀಡುತ್ತಿದ್ದಂತೆ ಚಿರತೆ ಪ್ರಜ್ಞೆ ತಪ್ಪಿದೆ. ತಕ್ಷಣ ಚಿರತೆಯನ್ನು ಸೆರೆ ಹಿಡಿದು, ವಾಹನದಲ್ಲಿ ತುಂಬಿ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ಗ್ರಾಮೀಣ ಭಾಗದ ಜನತೆಗೆ ಗುಡ್ ನ್ಯೂಸ್: 25 ದಿನಗಳಿಗೊಮ್ಮೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಎಲ್ ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಅಭಾವವಾಗುತ್ತಿರುವುದರಿಂದ ಗ್ರಾಹಕರು ಪರದಾಡುವಂತಾಗಿದೆ. ಈ ನಡುವೆ ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶದ ಜನರಿಗೆ ಗುಡ್ ನ್ಯೂಸ್ ನೂಡಿದ್ದಾರೆ.

ಪ್ರಮುಖ ಬೆಳವಣಿಗೆಯೊಂದರಲ್ಲಿ, ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ ಅವಧಿಯನ್ನ 45 ದಿನಗಳಿಂದ 25 ದಿನಗಳಿಗೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್ ಸುರೇಶ್ ಗೋಪಿ ಘೋಷಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಗ್ರಾಹಕರಿಗೂ 25 ದಿನಗಳಿಗೊಮ್ಮೆ ಎಲ್‌ಪಿಜಿ ರಿಫಿಲ್ ಬುಕ್ ಮಾಡುವ ಅವಕಾಶವನ್ನ ತಕ್ಷಣದಿಂದಲೇ ಜಾರಿಗೆ ತರಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಪೂರೈಕೆಯ ಮೇಲೆ ಉಂಟಾಗಿದ್ದ ಒತ್ತಡದಿಂದಾಗಿ ರಿಫಿಲ್ ಬುಕ್ಕಿಂಗ್ ಅವಧಿಯನ್ನ ಪರಿಷ್ಕರಿಸಲಾಗಿತ್ತು. ಆದರೆ, ಪ್ರಸ್ತುತ ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸುಧಾರಿಸಿದ್ದು, ರಿಫಿಲ್ ಬಾಕಿ ಪ್ರಮಾಣವೂ ಗಣನೀಯವಾಗಿ ಕಡಿಮೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಈ ನಿರ್ಬಂಧವನ್ನು ಸಡಿಲಿಕೆ ಮಾಡಿದೆ. ಇದೀಗ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಎಲ್ಲಾ ಗೃಹಬಳಕೆ ಎಲ್‌ಪಿಜಿ ಗ್ರಾಹಕರು 25 ದಿನಗಳ ಅಂತರದಲ್ಲಿ ರಿಫಿಲ್ ಬುಕ್ ಮಾಡಬಹುದು ಎಂದು ಅವರು ಹೇಳಿದ್ದಾರೆ.

ರೀಫಿಲ್‌ ಬುಕಿಂಗ್‌ ಸಮಯದ ಅಂತರವನ್ನು ನಗರ ಪ್ರದೇಶಗಳಲ್ಲಿ 25 ದಿನ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 45 ದಿನ ಎಂದು ನಿಗದಿಪಡಿಸಲಾಗಿತ್ತು. ಪ್ರಸ್ತುತ ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸುಧಾರಿಸಿದ್ದು, ಕೇಂದ್ರ ಸರಕಾರ ಈ ನಿರ್ಬಂಧವನ್ನು ತೆರವುಗೊಳಿಸಿದೆ. ಈ ಬದಲಾವಣೆಯನ್ನು ತಕ್ಷಣದಿಂದಲೇ ಜಾರಿಗೆ ತರಲು ಪೆಟ್ರೋಲಿಯಂ ಸಚಿವಾಲಯವು ತೈಲ ಮಾರುಕಟ್ಟೆ ಕಂಪನಿಗಳಿಗೆ ಕಳುಹಿಸಿರುವ ಪತ್ರದ ಪ್ರತಿಯನ್ನೂ ಸಚಿವರು ಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular