HomeLatest NewsBREAKING : ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ : ಗಂಭೀರ ಗಾಯ

BREAKING : ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ : ಗಂಭೀರ ಗಾಯ

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಭೀಕರ ಘಟನೆಯೊಂದು ಸಂಭವಿಸಿದೆ. ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ್ದು, ಪ್ರಾಣಿಪಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

ಇಂದು (ಶುಕ್ರವಾರ) ಬೆಳಿಗ್ಗೆ ಸುಮಾರು 8:30ರ ಸಮಯದಲ್ಲಿ ಪ್ರಾಣಿಪಾಲಕರಾದ ಶಾಂತಪ್ಪ ಅವರು ಚಿರತೆಗಳ ಕೇಜ್ಗಳನ್ನು (ಬೋನು) ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಚಿರತೆ ಅವರ ಮೇಲೆ ಜಿಗಿದು ದಾಳಿ ಮಾಡಿದೆ.

ಚಿರತೆಯ ದಾಳಿಗೆ ಸಿಲುಕಿದ ಶಾಂತಪ್ಪ ಅವರ ಮುಖ ಮತ್ತು ಕತ್ತಿನ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅಲ್ಲಿದ್ದ ಇತರ ಸಿಬ್ಬಂದಿಗಳು ಅವರನ್ನು ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಘಟನೆಯು ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಾನವನದ ಅಧಿಕಾರಿಗಳು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಸುರಕ್ಷತಾ ಕ್ರಮಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular