ಕೋರ್ಟ್ ಆವರಣಕ್ಕೇ ನುಗ್ಗಿದ ಚಿರತೆ; ಹಲವರ ಮೇಲೆ ದಾಳಿ

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ್ದು, ಹಲವು ಮಂದಿ ಮೇಲೆ ದಾಳಿ ನಡೆಸಿದೆ.

ಸಂಜೆ 4 ಗಂಟೆ ಸುಮಾರಿಗೆ ಚಿರತೆಯೊಂದು ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿದ್ದು, ಅಲ್ಲಿದ್ದ ಜನರಲ್ಲಿ ಆತಂಕ ಮೂಡಿಸಿತ್ತು. ಆಕ್ರಮಣಕಾರಿಯಾಗಿ ವರ್ತಿಸಿದ ಚಿರತೆ ಮಹಿಳಾ ವಕೀಲರು, ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಯಾಲಯದ ಆವರಣದ ಹೊರಗೆ ಕೆಲಸ ಮಾಡುವ ಚಮ್ಮಾರ ಸೇರಿದಂತೆ ಹಲವಾರು ಜನರನ್ನು ಗಾಯಗೊಳಿಸಿದೆ. ಅಷ್ಟರಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆಯ ತಂಡ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ಹಿಡಿದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

https://twitter.com/sanjaysah_india/status/1623279875233820673

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read