HomeKarnatakaಬೆಂಗಳೂರಿನಲ್ಲಿ ಆನೆ ದಾಳಿ ಬಳಿಕ ಚಿರತೆ ಪ್ರತ್ಯಕ್ಷ

ಬೆಂಗಳೂರಿನಲ್ಲಿ ಆನೆ ದಾಳಿ ಬಳಿಕ ಚಿರತೆ ಪ್ರತ್ಯಕ್ಷ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು, ಸ್ಥಳೀಯರ ನಿದ್ದೆಗೆಡಿಸಿದೆ. ಸೆ.28ರಂದು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಹಿಂಭಾಗ ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಬೆನ್ನಲ್ಲೇ ಇಂದು ಅಂಚೆಪಾಳ್ಯ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.

ಅಂಚೆಪಾಳ್ಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು. ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಕಾಡಾನೆಯೊಂದು ನಗರಕ್ಕೆ ಲಗ್ಗೆ ಇಟ್ಟು ವ್ಯಕ್ತಿಯೊಬ್ಬರನ್ನು ಬಲಿ ಪಡೆದ ಘಟನೆ ಬೆನ್ನಲ್ಲೇ ಈಗ ಚಿರತೆ ಕಾಣಿಸಿಕೊಂಡಿರುವುದು ಜನರು ಜೀವಭಯದಲ್ಲಿ ಬದುಕುವ ಸ್ಥಿತಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಜಾನೆ ಮೂರು ಗಂಟೆ ಸುಮಾರಿಗೆ ಅಂಚೆಪಾಳ್ಯದ ನಿರ್ಜನ ಪ್ರದೇಶವೊಂದರಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯವನ್ನು ಭದ್ರತಾ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆನೆ ಪ್ರತ್ಯಕ್ಷವಾದ ಜಾಗದ ಸಮೀಪದಲ್ಲೇ ಚಿರತೆ ಕೂಡ ಕಾಣಿಸಿಕೊಂಡಿದೆ. ಪದೇ ಪದೇ ವನ್ಯಜೀವಿಗಳು ನಗರದ ಕಡೆ ಬರುತ್ತಿರುವುದು ಅರಣ್ಯ ಇಲಾಖೆಗೆ ಹೊಸ ತಲೆನೋವು ಶುರುವಾದಂತಾಗಿದೆ.

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಹಿಂಭಾದಲ್ಲಿ ಕಾಡಾನೆ ದಾಳಿಗೆ ವಾಕಿಂಗ್ ಗೆ ಹೋಗಿದ್ದ ವ್ಯಕ್ತಿ ನಾಗರಾಜ್ ಬಲಿಯಾಗಿದ್ದರು. ಘಟನೆ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ಆನೆ ಪತ್ತೆ ಮಾಡಿ ಆನೆಯನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಅಟ್ಟಿದ್ದಾರೆ. ಇದರ ಬೆನ್ನಲ್ಲೇ ಇಂದು ಅದೇ ಭಾಗದ ಆಂಚೆಪಾಳ್ಯದ ನಿರ್ಜನ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಅಮಾನವೀಯವಾಗಿ ವರ್ತಿಸಿದ್ದ ದರ್ಶನ್: ಘಟನೆಯ ಬಗ್ಗೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರದೋಷ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ನ್ಯಾಯಾಲಯದಲ್ಲಿ ಕೊಲೆ ನಡೆದ ಸಂದ್ರಭದ ಬಗ್ಗೆ ಹಾಗೂ ನಟ ದರ್ಶನ್ ಅಟ್ಟಹಾಸದ ಬಗ್ಗೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾಗಿದ್ದು, ಬೆಂಗಳೂರಿನ 59ನೇ ಸೆಷನ್ಸ್‌ ನ್ಯಾಯಾಲಯದ ಮುಂದೆ ಸಾಕ್ಷಿ ದಾಖಲಿಸಿದ್ದಾರೆ. ಪ್ರದೋಶ್ ಅವರ ಸಾಕ್ಷಿ ಹೇಳಿಕೆಯನ್ನು ತಡೆಯಲು ದರ್ಶನ್ ಪರ ವಕೀಲರು ಇನ್ನಿಲ್ಲದ ಪ್ರಯತ್ನ ಮಾಡಿದರಾದರೂ ಸಾಧ್ಯವಾಗಿಲ್ಲ, (ಸೆಪ್ಟೆಂಬರ್ 28ರಂದು ನ್ಯಾಯಾಲಯದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಪ್ರದೋಷ್ ಸಾಕ್ಷ್ಯ ನುಡಿದಿದ್ದು, ಪ್ರಕರಣದ ಭೀಕರತೆಯನ್ನು ವಿವರಿಸಿದ್ದಾರೆ.

ರೇಣುಕಾಸ್ವಾಮಿ ವಿಚಾರವಾಗಿ ದರ್ಶನ್ ಹೇಗೆಲ್ಲ ನಡೆದುಕೊಂಡರು.ಹೇಗೆ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಅಟ್ಟಹಾಸ ಮೆರೆದರು ಎಂಬುದನ್ನು ಸಹ ವಿವರಿಸಿದ್ದಾರೆ.

ಆರ್​​ಆರ್​​ ನಗರದ ಸ್ಟೋನಿ ಬ್ರೂಕ್‌ನಲ್ಲಿ ಪ್ರದೋಶ್, ವಿನಯ್, ದರ್ಶನ್, ಚಿಕ್ಕಣ್ಣ ಇನ್ನಿತರರ ನಡುವೆ ನಡೆದ ಸಭೆಯಿಂದ ಆರಂಭಗೊಂಡು, ಪಟ್ಟಣಗೆರೆ ಶೆಡ್‌ನಲ್ಲಿ ನಡೆದ ಘಟನೆಗಳ ವರೆಗೆ ಅಂದು ನಡೆದ ಪ್ರತಿಯೊಂದು ಕೃತ್ಯವನ್ನು ಪ್ರದೋಷ್ ನ್ಯಾಯಾಲಯದ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ವಿಶೇಷವಾಗಿ ದರ್ಶನ್ ಹಾಗೂ ಇನ್ನೂ ಕೆಲವರು ರೇಣುಕಾಸ್ವಾಮಿ ಮೇಲೆ ಎಸಗಿದ ಅಮಾನವೀಯ ಹಲ್ಲೆ, ರೇಣುಕಾಸ್ವಾಮಿಯನ್ನು ನಡೆಸಿಕೊಂಡ ರೀತಿಯ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ.

ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಮಾಡಿದ ಸಂದೇಶದಿಂದಾಗಿ ಸಿಟ್ಟಿನಲ್ಲಿದ್ದ ದರ್ಶನ್, ಪಟ್ಟಣಗೆರೆ ಶೆಡ್​​​ನಲ್ಲಿ ಹಲವಾರು ಬಾರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿರುವುದಾಗಿ ಪ್ರತ್ಯಕ್ಷದರ್ಶಿ ಪ್ರದೋಷ್ ಹೇಳಿದ್ದಾರೆ. ಪವಿತ್ರಾ ಗೌಡ ಸಹ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ಕೆನ್ನೆಗೆ ಹೊಡೆದ ವಿಷಯ. ರೇಣುಕಾಸ್ವಾಮಿ ಪವಿತ್ರಾ ಗೌಡ ಮತ್ತು ದರ್ಶನ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿಷಯಗಳನ್ನು ಅಂದು ನಡೆದಂತೆ ಎಲವನ್ನೂ ನ್ಯಾಯಾಲಯದ ಮುಂದೆ ಪ್ರದೋಶ್ ವಿವರಿಸಿದ್ದಾರೆ.

ಪ್ರದೋಷ್ ಹೇಳಿಕೆಯನ್ನು ಭದ್ರವಾಗಿ ಇಡಲಾಗಿದೆ. ಇಂದು ಕೂಡ ಪ್ರದೋಷ್ ಕೋರ್ಟ್ ಗೆ ಹಾಜರಾಗಿ ಹೇಳಿಕೆ ಮುಂದುವರೆಸಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular