ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಲೇಔಟ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು , ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಹೌದು, ನಗರದ ಕೆಂಗೇರಿ ಸಮೀಪದ ಕೆಂಪೇಗೌಡ ಲೇಔಟ್ ನಲ್ಲಿ ಕಳೆದ ಮೂರು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಕೆಂಪೇಗೌಡ ಲೇಔಟ್ ನ ಭೀಮನಕುಪ್ಪೆ ಕೆರೆ ಬಳಿ ಚಿರತೆಯೊಂದು ಓಡಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.