‘DCM ಡಿಕೆಶಿ ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ’ -ಶಾಸಕ ಮುನಿರತ್ನ

ಬೆಂಗಳೂರು : DCM ಡಿ.ಕೆ.ಶಿವಕುಮಾರ್ ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಮುನಿರತ್ನ ನನಗೆ ಆರ್ ಕ್ಷೇತ್ರದ ಅಭಿವೃದ್ದು ಮುಖ್ಯವಷ್ಟೇ..ಡಿಸಿಎಂ ಡಿಕೆಶಿ ನನ್ನನ್ನು ಬೇಕಿದ್ರೆ ಜೈಲಿಗೆ ಹಾಕಲಿ… ನನ್ನನ್ನು ಜೈಲಿನಲ್ಲಿ ಇಟ್ಟು ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡಲಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.

ಬೇಕಿದ್ರೆ ರಾಜಕೀಯ ನಿವೃತ್ತಿಯಾಗುತ್ತೀನಿ, ಆದರೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಗಂತೂ ಹೋಗಲ್ಲ. 17 ಜನರಲ್ಲಿ ಯಾರು ಕಾಂಗ್ರೆಸ್ ಹೋಗ್ತಾರೋ ಗೊತ್ತಿಲ್ಲ, ನಾನಂತೂ ಹೋಗಲ್ಲ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದಾರೆ.
ಬಿಜೆಪಿಯನ್ನು ಬಹಳ ಗೌರವದಿಂದ ನೋಡುತ್ತೀನಿ. ಯಾರೂ ಕೂಡ ಬಿಜೆಪಿಯಲ್ಲಿ ಇದುವರೆಗೆ ನನ್ನ ಬಗ್ಗೆ ಏಕವಚನದಿಂದ ಮಾತನಾಡಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆಪರೇಷನ್ ಹಸ್ತದ ಬಾಂಬ್ ಸಿಡಿಸಿದ ಡಿಕೆಶಿ

ಇನ್ನೂ, ಆಪರೇಷನ್ ಹಸ್ತದ ಕುರಿತಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದು. ಲೋಕಸಭೆ ಚುನಾವಣೆಗೆ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಪಕ್ಷದ ನಾಯಕರಿಗೆ ತಿಳಿಸಿದ್ದೇವೆ ಎಂದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ನಾವು ಲೋಕಸಭೆ ಚುನಾವಣೆಗೆ ತಯಾರಿ ನಡೆಸಿ ಎಂದು ಹೇಳಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಕುರಿತಂತೆ ಚರ್ಚೆ ನಡೆಸಲಾಗಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಗೆ ಮತ ಪ್ರಮಾಣದ ಹೆಚ್ಚಿಸಲು ಕರೆ ಕೊಟ್ಟಿದ್ದೇವೆ. ಸ್ಥಳೀಯ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷಕ್ಕೆ ಒಳ್ಳೆದಾಗುವ ಕೆಲಸವನ್ನು ಸ್ಥಳೀಯ ನಾಯಕರು ಮಾಡುತ್ತಾರೆ ಎಂದರು.
ಮತ್ತೊಂದಡೆ ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದ್ರೂ ಸ್ವಾಗತ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದು, ಯಾರೇ ಕಾಂಗ್ರೆಸ್ ಪಕ್ಷಕ್ಕೆ ಬಂದ್ರೂ ಸ್ವಾಗತ, ಪಕ್ಷಕ್ಕೆ ಸೇರಿಸಿಕೊಳ್ಳಬೇಕೋ ಅಥವಾ ಬೇಡ್ವಾ ಅಂತ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read