BIG NEWS : ಕರುನಾಡಿಗೆ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ : ‘ಕಾವೇರಿ ಹೋರಾಟ’ ಕ್ಕೆ ನಟ ದರ್ಶನ್ ಸಾಥ್

ಬೆಂಗಳೂರು : ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್ ನಟರು ಬೆಂಬಲ ನೀಡಿಲ್ಲ ಎಂಬ ಆಕ್ರೋಶದ ಕೂಗು ಕೇಳಿಬಂದ ಬೆನ್ನಲ್ಲೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್   ಪೋಸ್ಟ್  ಮಾಡಿದ್ದಾರೆ.

ಈ ಬಗ್ಗೆ ನಟ ದರ್ಶನ್   ಫೇಸ್ ಬುಕ್ ನಲ್ಲಿ    ಪೋಸ್ಟ್   ಮಾಡಿದ್ದು, ‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’ ಎಂದು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ.

ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಕನ್ನಡ ಚಿತ್ರರಂಗದ ನಟರು ಕಾವೇರಿ ನೀರಿಗಾಗಿ ಧ್ವನಿ ಎತ್ತುತ್ತಿಲ್ಲ ಎಂದು ಮಂಡ್ಯ ಭಾಗದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದರು. ಸ್ಯಾಂಡಲ್ ವುಡ್ ನಟರ ವಿರುದ್ಧ ಧಿಕ್ಕಾರ ಎಂದು ಪೋಸ್ಟರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ  ಕನ್ನಡಪರ ಸಂಘಟನೆ ಹಾಗೂ ರಕ್ಷಣಾ ವೇದಿಕೆ ಕಾರ್ಯಕರ್ತರು ಸ್ಯಾಂಡಲ್ ವುಡ್ ನಟರ ವಿರುದ್ಧ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read