ಕಾನೂನು ಎಲ್ಲರಿಗೂ ಒಂದೇ; ಬ್ರಿಜ್ ಭೂಷಣ್ ವಿರುದ್ಧ ಹೋರಾಡುತ್ತಿರುವ ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

ಬಿಜೆಪಿ ಸಂಸದ ಮತ್ತು WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರ ಕುಸ್ತಿಪಟುಗಳು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಅಮಿತ್ ಶಾ ಹೇಳಿರುವುದಾಗಿ ಗೊತ್ತಾಗಿದೆ.

ಒಲಿಂಪಿಯನ್ ಬಜರಂಗ್ ಪೂನಿಯಾ ಅವರು ಶನಿವಾರ ರಾತ್ರಿ ಗೃಹ ಸಚಿವರನ್ನು ಅವರ ದೆಹಲಿಯ ಮನೆಯಲ್ಲಿ ಭೇಟಿಯಾದರು ಎಂದು ತಿಳಿದುಬಂದಿದೆ.

ರಾತ್ರಿ 11 ಗಂಟೆಗೆ ಆರಂಭವಾದ ಸಭೆಯು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಭೇಟಿ ವೇಳೆ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯನ್ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆ ಮತ್ತು ತ್ವರಿತ ಕ್ರಮಕ್ಕೆ ಕುಸ್ತಿಪಟುಗಳು ಅಮಿತ್ ಶಾ ಅವರಿಗೆ ಒತ್ತಾಯಿಸಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದ್ದು, ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿ ಎಂದು ಕುಸ್ತಿಪಟುಗಳಿಗೆ ಹೇಳಿದರು.

ಕುಸ್ತಿ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಐದು ದಿನಗಳ ಗಡುವು ಶನಿವಾರ ಕೊನೆಗೊಂಡ ನಂತರ ಪ್ರತಿಭಟನಾ ನಿರತ ಕುಸ್ತಿಪಟುಗಳು ಅಮಿತ್ ಶಾ ಅವರನ್ನು ಭೇಟಿಯಾಗಲು ಕೋರಿದ್ದರು.

ಕುಸ್ತಿ ಒಕ್ಕೂಟದ ಮುಖ್ಯಸ್ಥರ ವಿರುದ್ಧದ ತಮ್ಮ ಪ್ರತಿಭಟನೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿರುವ ಕುಸ್ತಿಪಟುಗಳು, ಕಳೆದ ತಿಂಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಆದಾಗ್ಯೂ ರೈತ ಮುಖಂಡ ನರೇಶ್ ಟಿಕಾಯತ್ ಅವರ ಮಧ್ಯಸ್ಥಿಕೆಯ ನಂತರ ಅವರು ತಮ್ಮ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಟ್ಟರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read