‘ಸತ್ಯ ಹೊರಗೆ ಬರಲಿ ದೊಡ್ಡ ದೊಡ್ಡವರ ಹೆಸರು ಬಯಲಾಗುತ್ತೆ’ : ‘ಚೈತ್ರಾ ಕುಂದಾಪುರ’ ಸ್ಪೋಟಕ ಹೇಳಿಕೆ

ಬೆಂಗಳೂರು : ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಚೈತ್ರಾ ಕುಂದಾಪುರ ಬಂಧನದ ವೇಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತರುವ ವೇಳೆ ಮಾಧ್ಯಮಗಳ ಎದುರು ಸದ್ಯದಲ್ಲೇ ದೊಡ್ಡ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾರೆ.

ಮುಂದೆ ಸತ್ಯ ಹೊರ ಬರಲಿದೆ, ದೊಡ್ಡ ದೊಡ್ಡವರ ಹೆಸರು ಬಯಲಾಗುತ್ತದೆ. ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಚೈತ್ರಾ ಆರೋಪ ಮಾಡಿದ್ದಾರೆ.
ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕಿ ಚೈತ್ರಾ ಕುಂದಾಪುರ ಸೇರಿ ಒಟ್ಟು 6 ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ಗಗನ್, ಧನರಾಜ್, ರಾಜಕೀಯ ಮುಖಂಡ, ಸ್ವಾಮೀಜಿ ಹಾಗೂ ಇನ್ನೋರ್ವ ಸಾಮಾಜಿಕ ಹೋರಾಟಗಾರ ಸೇರಿ ಒಟ್ಟು 6 ಜನರನ್ನು ಬಂಧಿಸಲಾಗಿದೆ .

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚಿಸಿತ್ತು. ಕಬಾಬ್ ಮಾರುವ ವ್ಯಕ್ತಿ, ಸಲೂನ್ ಮೇಕಪ್ ಮ್ಯಾನ್ ಹಾಗೂ ಇನ್ನೋರ್ವನಿಗೆ ಆರ್.ಎಸ್.ಎಸ್ ಮುಖಂಡನ ವೇಷ, ಬಿಜೆಪಿ ಕೇಂದ್ರ ನಾಯಕರ ವೇಷ ತೊಡಿಸಿ ನಾಟಕವಾಡಲು ರಂಗತಾಲೀಮು ನಡೆಸಿ ಉದ್ಯಮಿಯನ್ನು ವಂಚಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read