ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಿಂದ ಹಿರೇಮಗಳೂರು ಕಣ್ಣನ್ ಕೈಬಿಡಲು ಎಂಎಲ್ಸಿ ಮಂಜುನಾಥ ಭಂಡಾರಿ ಪತ್ರ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಹಿರೇಮಗಳೂರು ಕಣ್ಣನ್ ಅವರನ್ನು ಕೈ ಬಿಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ.

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಪತ್ರ ಬರೆದಿರುವ ಮಂಜುನಾಥ ಭಂಡಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಸಮಿತಿಗೆ ಹಿರೇಮಗಳೂರು ಕಣ್ಣನ್ ಅವರನ್ನು ಸದಸ್ಯರನ್ನಾಗಿ ನೇಮಿಸಿದ ಆದೇಶವನ್ನು ರದ್ದುಪಡಿಸಿ ಬೇರೆಯವರನ್ನು ನೇಮಕ ಮಾಡುವಂತೆ ಕೋರಿದ್ದಾರೆ.

ಹಿರೇಮಗಳೂರು ಕಣ್ಣನ್ ಅವರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಕ್ಕೆ ವ್ಯತಿರಿಕ್ತವಾಗಿ ಅನೇಕ ಸಲ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಅವರ ನೇಮಕದಿಂದ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗುವುದರಿಂದ ಕೂಡಲೇ ಅವರನ್ನು ಆಯ್ಕೆ ಸಮಿತಿಯಿಂದ ಕೈಬಿಡಬೇಕು ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read