ಭಾರತೀಯ ರೈಲ್ವೆ ಬೆಂಗಳೂರು-ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿಯನ್ನು ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಸಂಪರ್ಕಿಸುವ ಪ್ರಮುಖ ರೈಲು ಇದಾಗಿದೆ.
ಈ ಕುರಿತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಬೆಂಗಳೂರು-ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿಗೆ ಹೊಸ ಎಲ್‌ಎಚ್‌ಬಿ (LHB) ಕೋಚ್‌ಗಳ ಸೇರ್ಪಡೆ ಎಂದು ಹೇಳಿದ್ದಾರೆ.
ಸಂಸದರು ತಮ್ಮ ಪೋಸ್ಟ್‌ನಲ್ಲಿ ಬೆಂಗಳೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ 20651/ 20652ಕ್ಕೆ ಮಾರ್ಚ್ 26 ರಿಂದ ಅತ್ಯಾಧುನಿಕ ಸೌಲಭ್ಯವುಳ್ಳ ಹೊಸ ಎಲ್‌ಎಚ್‌ಬಿ ಬೋಗಿಗಳನ್ನು ಅಳವಡಿಸಿ ಚಾಲನೆ ನೀಡಲಾಗಿದೆ.
ನಮ್ಮ ಶಿವಮೊಗ್ಗ ಕ್ಷೇತ್ರದ ಜನರ ರೈಲ್ವೆ ಬೇಡಿಕೆಗಳನ್ನು ಈಡೇರಿಸಲು ಸತತವಾಗಿ ಶ್ರಮಿಸುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.

