HomeLatest Newsಗೃಹಲಕ್ಷ್ಮಿ ಫಲಾನುಭವಿಗಳಿಗೆ ಜೀವಿತ ಪ್ರಮಾಣ ಪತ್ರ ಕಡ್ಡಾಯ: ಗ್ಯಾರಂಟಿ ನಿಲ್ಲಿಸುವ ಹುನ್ನಾರ: ಆರ್. ಅಶೋಕ್ ಆಕ್ರೋಶ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಜೀವಿತ ಪ್ರಮಾಣ ಪತ್ರ ಕಡ್ಡಾಯ: ಗ್ಯಾರಂಟಿ ನಿಲ್ಲಿಸುವ ಹುನ್ನಾರ: ಆರ್. ಅಶೋಕ್ ಆಕ್ರೋಶ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣ ಪತ್ರ(ಲೈಫ್ ಸರ್ಟಿಫಿಕೇಟ್) ಕೊಡಬೇಕು ಎನ್ನುವ ಹೊಸ ನಿಯಮ ಜಾರಿಗೊಳಿಸಲು ಸರ್ಕಾರ ಮುಂದಾಗಿರುವುದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಾರ್. ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರ ಬಂದ ಮೇಲೆ ಎರಡು ಲಕ್ಷ ಕೋಟಿ ರೂ. ಸಾಲ ಮಾಡಿದೆ. ಈ ಬಜೆಟ್ ಗೆ ಸಾಲದ ಮೊತ್ತ ಮೂರು ಲಕ್ಷ ಕೋಟಿ ರೂ. ಆಗಲಿದೆ. ಅವರ ಬಳಿ ಹಣವಿಲ್ಲದ ಕಾರಣ ಈಗಾಗಲೇ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಿದ್ದಾರೆ. ಈಗ ಗ್ಯಾರಂಟಿ ಯೋಜನೆಗಳನ್ನು ಕಡಿತ ಮಾಡಲು ಮುಂದಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಲೈಫ್ ಸರ್ಟಿಫಿಕೇಟ್ ಕೊಡಬೇಕು ಎನ್ನುವ ನಿಯಮ ಜಾರಿಗೊಳಿಸಲು ಮುಂದಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫುಟ್ಪಾತ್ ವ್ಯಾಪಾರಿಗಳ ರೇಷನ್ ಕಾರ್ಡ್ ಕೂಡ ರದ್ದು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ತುಘಲಕ್ ಸರ್ಕಾರವಾಗಿದೆ. ಇದು ಪಾಪರ್ ಸರ್ಕಾರ. ಇನ್ನು ಮುಂದೆ ಎಲ್ಲಾ ಯೋಜನೆಗಳನ್ನು ಕಡಿತಗೊಳಿಸಿ ಬಡವರ ವಿರೋಧಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular