HomeIndiaಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ.ವರೆಗಿನ ಜೀವ, ಅಪಘಾತ ವಿಮೆ ರಕ್ಷಣೆ: ಕೇಂದ್ರ ಸಚಿವೆ ಸ್ಮೃತಿ...

ಅಂಗನವಾಡಿ ಕಾರ್ಯಕರ್ತೆಯರಿಗೆ 2 ಲಕ್ಷ ರೂ.ವರೆಗಿನ ಜೀವ, ಅಪಘಾತ ವಿಮೆ ರಕ್ಷಣೆ: ಕೇಂದ್ರ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು ಲಕ್ಷ ರೂಪಾಯಿಗಳವರೆಗಿನ ಆಕಸ್ಮಿಕ ರಕ್ಷಣೆಯ ಪ್ರಯೋಜನಗಳನ್ನು ವಿಸ್ತರಿಸಲಾಗಿದೆ ಮತ್ತು ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ತಿಳಿಸಲಾಗಿದೆ. ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಈ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಸಮುದಾಯ ಆಧಾರಿತ ಕಾರ್ಯಕ್ರಮಕ್ಕೆ 250 ರೂಪಾಯಿಗಳನ್ನು ಕಾರ್ಮಿಕರಿಗೆ ನೀಡಲಾಗುತ್ತದೆ. ಮತ್ತು ಕಾರ್ಮಿಕರು ಫಲಾನುಭವಿಯ ಮನೆಗೆ ಭೇಟಿ ನೀಡಿದರೆ ಅಥವಾ WHO ಮಾನದಂಡಗಳ ಪ್ರಕಾರ ಮಗುವನ್ನು ಅಳತೆ ಮಾಡಿದರೆ 500 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್‌ನ ಪ್ರಯೋಜನಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗಿದೆ ಎಂದು ನಿನ್ನೆ ಮಧ್ಯಂತರ ಬಜೆಟ್‌ ನಲ್ಲಿ ಸಚಿವರು ಘೋಷಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular