ಸರ್ಕಾರದಿಂದಲೇ ಮೀನುಗಾರರಿಗೆ ಜೀವರಕ್ಷಕ ಜಾಕೆಟ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ತಿಳಿಸಿದರು.
ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ನೀಡಿದ ಅವರು, ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳುವ ದೋಣಿಗಳು ಅಪಘಾತಕ್ಕೆ ಒಳಗಾಗಿ, ಮೀನುಗಾರರು ಮೃತರಾಗುತ್ತಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸರ್ಕಾರದಿಂದಲೇ ಮೀನುಗಾರರಿಗೆ ಜೀವರಕ್ಷಕ ಜಾಕೆಟ್ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.