ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಬ್ಯಾನರ್ ತೆರವು ವಿಚಾರ ಸಂಬಂಧ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಮುಖಂಡ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ನೀಡಲು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿದೆ.
ಶಿಡ್ಲಘಟ್ಟದ ನಡುರಸ್ತೆಯಲ್ಲಿ ಕಟ್ಟಿದ ಬ್ಯಾನರ್ ಅನ್ನು ನಗರಸಭೆ ಪೌರಕಾರ್ಮಿಕರು ತೆರವುಗೊಳಿಸಿದ್ದಕ್ಕೆ ಕೋಪಗೊಂಡ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಚಿಕ್ಕಬಳ್ಳಾಪುರ ಎಸ್ಪಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

