ಮಾವಿನಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ನಮ್ಮ ಸೌಂದರ್ಯವನ್ನೂ ಕೂಡ ವೃದ್ಧಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ.
1 ಮಾವಿನ ಹಣ್ಣಿನ ತಿರುಳಿಗೆ 1 ಚಮಚ ಕಡಲೆಹಿಟ್ಟು , 1 ಚಮಚ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಮಸಾಜ್ ಮಾಡಿ 25 ನಿಮಿಷ ಬಿಟ್ಟು ವಾಶ್ ಮಾಡಿ ಇದನ್ನು ವಾರಕ್ಕೊಮ್ಮೆ ಮಾಡಿ.
5-6 ಬಾದಾಮಿಯನ್ನು ನೆನೆಸಿ ಅದನ್ನು ಪೇಸ್ಟ್ ಮಾಡಿಕೊಂಡು ಅದಕ್ಕೆ ಮಾವಿನ ಹಣ್ಣಿನ ತಿರುಳು ಮತ್ತು 1 ಚಮಚ ಜೇನುತುಪ್ಪವನ್ನು ಮಿಕ್ಸ್ ಮಾಡಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ 20 ನಿಮಿಷದ ಬಳಿಕ ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ನಿಮ್ಮ ಮುಖದ ಚರ್ಮದ ಹೊಳಪು ಹೆಚ್ಚಾಗಿ ನೀವು ಅಂದವಾಗಿ ಕಾಣಿತ್ತೀರಿ.