ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಜರ್ ಬಳಸುವಂತೆ ಸೂಚನೆ ನೀಡಲಾಗಿದೆ. ಆದ್ರೆ ಅಗತ್ಯಕ್ಕಿಂತ ಹೆಚ್ಚು ಸ್ಯಾನಿಟೈಜರ್ ಬಳಕೆಯಿಂದ ಚರ್ಮ ಕಾಯಿಲೆಗಳು ಕಾಡಲಿವೆ. ಕುರುಡುತನದ ಜೊತೆ ಸಾವು ಸಂಭವಿಸುವ ಸಾಧ್ಯತೆ ಅಲ್ಲಗಳೆಯಲು ಸಾಧ್ಯವಿಲ್ಲವೆಂದು ತಜ್ಞರು ಹೇಳಿದ್ದಾರೆ.
ಕೊರೊನಾ ವೈರಸ್ ಕೊಲ್ಲುವ ಹ್ಯಾಂಡ್ ಸ್ಯಾನಿಟೈಜರ್ ಗೆ ಮೆಥನಾಲ್ ಹೆಚ್ಚು ಬಳಸಲಾಗುತ್ತಿದೆ. ಇದು ಕೈಗಳ ಮೂಲಕ ದೇಹ ತಲುಪಿದ್ರೆ ಕುರುಡುತನದ ಜೊತೆ ಸಾವು ಸಂಭವಿಸುವ ಸಾಧ್ಯತೆಯಿದೆ. ಸ್ಯಾನಿಟೈಜರ್ ಬಳಕೆ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವುದು ಬಹಳ ಮುಖ್ಯ. ಹ್ಯಾಂಡ್ ಸ್ಯಾನಿಟೈಜರ್ ಹೆಚ್ಚಿನ ಬಳಕೆ ಮಕ್ಕಳ ಮೇಲೆ ಅಡ್ಡಪರಿಣಾಮ ಬೀರುತ್ತದೆ. ಇದೇ ಕಾರಣಕ್ಕೆ ಅನೇಕ ದೇಶಗಳಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಬಳಕೆಯನ್ನು ನಿಷೇಧಿಸಲಾಗಿದೆ.
ಕೊರೊನಾ ನಂತ್ರ ವಿಶ್ವದಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಬಳಕೆ ಶೇಕಡಾ 620 ರಷ್ಟು ಹೆಚ್ಚಾಗಿದೆ. ನ್ಯೂ ಮೆಕ್ಸಿಕೊದಲ್ಲಿ ಹ್ಯಾಂಡ್ ಸ್ಯಾನಿಟೈಜರ್ ಬಳಸಿ ನಾಲ್ಕು ಮಂದಿ ಸಾವನ್ನಪ್ಪಿದ್ದರೆ ಮೂವರು ದೃಷ್ಟಿ ಕಳೆದುಕೊಂಡಿದ್ದಾರೆ. ಹ್ಯಾಂಡ್ ಸ್ಯಾನಿಟೈಜರ್ ಬಳಕೆಯನ್ನು ಅಗತ್ಯವಿದ್ದಾಗ ಬಳಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಮನೆಯಲ್ಲಿದ್ದಾಗ ಸೋಪ್ ಬಳಸುವಂತೆ ಸೂಚನೆ ನೀಡಿದ್ದಾರೆ.