ಸಾಮಾನ್ಯವಾಗಿ ಬಾಳೆಹಣ್ಣು ಆರೋಗ್ಯಕ್ಕೆ ಉತ್ತಮ. ಆದರೆ ಕೆಂಪು ಬಾಳೆಹಣ್ಣು ಆರೋಗ್ಯ ಮತ್ತಷ್ಟು ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಪೋಷಕಾಂಶಗಳಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.
*ಇತ್ತೀಚಿನ ದಿನಗಳಲ್ಲಿ ಮೊಬೈಲ್, ಟಿವಿ ಬಳಕೆ ಹೆಚ್ಚಾಗುತ್ತಿದ್ದರಿಂದ ಕಣ್ಣಿನ ಸಮಸ್ಯೆ ಕಾಡುತ್ತದೆ. ಹಾಗಾಗಿ ಅಂತವರು ಕೆಂಪು ಬಾಳೆಹಣ್ಣನ್ನು ಸೇವಿಸಿದರೆ ಕಣ್ಣಿನ ಸಮಸ್ಯೆಯಿಂದ ದೂರವಿರಬಹುದು.
*ಜಂಕ್ ಫುಡ್, ಹುರಿದ ಆಹಾರಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತದೆ. ಅಂತಹ ವೇಳೆ ಕೆಂಪು ಬಾಳೆಹಣ್ಣನ್ನು ಸೇವಿಸಬೇಕು. ಅದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆ ನಿವಾರಣೆಯಾಗತ್ತದೆ.
‘ಹಾಲಿನ ಪುಡಿಯಿಂದ ಮಾಡಿದ ಸಿಹಿ ಪೇಡ ‘
*ಕೆಂಪು ಬಾಳೆಹಣ್ಣಿನಲ್ಲಿ ಸಾಕಷ್ಟು ಕಬ್ಬಿಣಾಂಶವಿದೆ. ಇದನ್ನು ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಕಬ್ಬಿಣಾಂಶದ ಕೊರತೆಯನ್ನು ನೀಗಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ.
*ಇದರಲ್ಲಿ ಫೈಬರ್ ಇರುವುದಿಂದ ಇದು ಹಸಿವನ್ನು ನಿಯಂತ್ರಿಸುತ್ತದೆ. ಇದರಿಂದ ತೂಕ ಇಳಿಸಿಕೊಳ್ಳಬಹುದು.