ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ.
ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು.
ರಕ್ತಹೀನತೆಗೂ ಇದು ರಾಮಬಾಣ.
ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ.
ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ.
ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಹೃದಯ ಖಾಯಿಲೆಗಳಿಗೂ ಇದು ರಾಮಬಾಣ. ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣವನ್ನು ಹೆಚ್ಚು ಮಾಡುತ್ತದೆ.
ಜೀರ್ಣಕ್ರಿಯೆಗೆ ಕರಿಬೇವು ಒಳ್ಳೆಯದು.
ಇನ್ನು, ದಟ್ಟ ಕೂದಲಿಗೆ, ಚರ್ಮದ ಸೋಂಕು ನಿವಾರಣೆಗೆ ಅಷ್ಟೇ ಏಕೆ ತೂಕ ಇಳಿಕೆಗೂ ಕರಿಬೇವು ಸಹಕಾರಿ.