ವಿಶ್ವದಾದ್ಯಂತ ಮಧುಮೇಹ ವೇಗವಾಗಿ ಹೆಚ್ಚುತ್ತಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ. ಇದು ದೇಹದ ಇನ್ಸುಲಿನ್ ಉತ್ಪಾದನಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.
ಮಧುಮೇಹ ಬಂದ ಮೇಲೆ ಪಶ್ಚಾತಾಪ ಪಡುವ ಬದಲು ಬರುವ ಮೊದಲೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಲ ಮನೆಮದ್ದುಗಳ ಮೂಲಕ ಮಧುಮೇಹವನ್ನು ದೂರವಿಡಬಹುದು. ಚೀನಾದಲ್ಲಿ ಪ್ರಾಚೀನ ಕಾಲದಿಂದಲೂ ಮಧುಮೇಹ ನಿಯಂತ್ರಣಕ್ಕಾಗಿ ಈ ವಿಧಾನವನ್ನು ಬಳಸಲಾಗುತ್ತಿದೆ.
ಚೀನೀಗಳ ಪ್ರಕಾರ, ಮಧುಮೇಹವನ್ನು ಗುಣಪಡಿಸಲು ಮಾವಿನ ಎಲೆಗಳು ಅತ್ಯುತ್ತಮ ಔಷಧ. ಮಾವಿನ ಎಲೆಗಳು ಪೆಕ್ಟಿನ್, ಫೈಬರ್ ಮತ್ತು ವಿಟಮಿನ್ ಸಿ ನಂತಹ ಪೌಷ್ಟಿಕಾಂಶವನ್ನು ಹೊಂದಿವೆ. ಇದರಿಂದಾಗಿ ಕೆಟ್ಟ ಕೊಲೆಸ್ಟರಾಲ್ ಮಟ್ಟವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಅಸ್ತಮಾ ಮತ್ತು ಡಯಾಬಿಟೀಸ್ ಖಾಯಿಲೆಗೆ ಈ ಎಲೆಗಳು ಉತ್ತಮ ಔಷಧ.
ಸಂಶೋಧನೆಯ ಪ್ರಕಾರ ಮಾವಿನ ಎಲೆಗಳಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಹಿರಂಗಪಡಿಸಲಾಗಿದೆ. ಮಾವಿನ ಎಲೆಗಳು ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಸರಿಪಡಿಸುತ್ತವೆ. ಇದು ಕ್ರಮೇಣ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರುತ್ತದೆ.