alex Certify ರುಚಿಕರವಾದ ಓಟ್ಸ್ ದೋಸೆ ಮಾಡುವ ವಿಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರುಚಿಕರವಾದ ಓಟ್ಸ್ ದೋಸೆ ಮಾಡುವ ವಿಧಾನ

ತೂಕ ಇಳಿಸಿಕೊಳ್ಳುವವರಿಗೆ ಓಟ್ಸ್ ಎಂದರೆ ತುಂಬಾ ಇಷ್ಟ. ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಇಲ್ಲಿ ಬೇಗನೆ ಆಗಿಬಿಡುವಂತಹ ಓಟ್ಸ್ ದೋಸೆ ಮಾಡುವ ವಿಧಾನ ಇದೆ ಟ್ರೈ ಮಾಡಿ.

ಬೇಕಾಗುವ ಸಾಮಗ್ರಿಗಳು:

½ ಕಪ್- ಓಟ್ಸ್, 2 ಟೇಬಲ್ ಸ್ಪೂನ್-ಅಕ್ಕಿ ಹಿಟ್ಟು, ¼ ಕಪ್- ರವೆ, ½ ಕಪ್- ಮೊಸರು, ¼ ಕಪ್- ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ, 2 ಟೇಬಲ್ ಸ್ಪೂನ್- ಚಿಕ್ಕದಾಗಿ ಕತ್ತರಿಸಿದ ಕೊತ್ತಂಬರಿಸೊಪ್ಪು, ಉಪ್ಪು-ರುಚಿಗೆ ತಕ್ಕಷ್ಟು, ಎಣ್ಣೆ-ಸ್ವಲ್ಪ.

ಡ್ರೈಫ್ರುಟ್ ಗಳಲ್ಲಿ ಅಡಗಿದೆ ಸೌಂದರ್ಯದ ಗುಟ್ಟು….!

ಮಾಡುವ ವಿಧಾನ:

ಒಂದು ಬೌಲ್ ಗೆ ಓಟ್ಸ್, ಅಕ್ಕಿ ಹಿಟ್ಟು, ರವೆ, ಮೊಸರು, ಕೊತ್ತಂಬರಿಸೊಪ್ಪು, ಈರುಳ್ಳಿ, ಉಪ್ಪು ಹಾಕಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ 1 ಕಪ್ ನೀರು ಸೇರಿಸಿ ಮಿಕ್ಸ್ ಮಾಡಿ. ನಂತರ ಗ್ಯಾಸ್ ಮೇಲೆ ತವಾ ಇಟ್ಟು ಅದಕ್ಕೆ ಎಣ್ಣೆ ಸವರಿಕೊಂಡು ಒಂದು ಸೌಟು ಹಿಟ್ಟನ್ನು ಹಾಕಿ ದೋಸೆ ಮಾಡಿಕೊಳ್ಳಿ. ಎರಡೂ ಕಡೆ ಚೆನ್ನಾಗಿ ಬೇಯಿಸಿಕೊಂಡು ತೆಂಗಿನಕಾಯಿ ಚಟ್ನಿ ಜತೆ ಸವಿಯಿರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...