alex Certify ಕೊರೊನಾ ವೈರಸ್ ನಿಯಂತ್ರಣದ ಲಸಿಕೆ ಕುರಿತು ಇಲ್ಲಿದೆ ಶುಭಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವೈರಸ್ ನಿಯಂತ್ರಣದ ಲಸಿಕೆ ಕುರಿತು ಇಲ್ಲಿದೆ ಶುಭಸುದ್ದಿ

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ವೈರಸ್ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದರ ನಿಯಂತ್ರಣಕ್ಕಾಗಿ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಿರಂತರವಾಗಿ ನಡೆದಿದ್ದು, ಇದರ ಮಧ್ಯೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಶುಭ ಸುದ್ದಿಯೊಂದನ್ನು ನೀಡಿದೆ.

ವಿಶ್ವವಿದ್ಯಾಲಯದಿಂದ ಅಭಿವೃದ್ಧಿಪಡಿಸಲಾಗಿರುವ ಕೊರೊನಾ ವೈರಸ್ ನಿಯಂತ್ರಣ ಲಸಿಕೆಯನ್ನು ಸಂಶೋಧನೆಯ ಭಾಗವಾಗಿ ಕೋತಿಗಳ ಮೇಲೆ ಪ್ರಯೋಗಿಸಲಾಗಿದ್ದು, ಇದರಲ್ಲಿ ಯಶಸ್ಸು ಕಂಡು ಬಂದಿದೆ ಎಂದು ಹೇಳಲಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಕಂಡುಬರುವ ಮಕಾಕಾ ಪ್ರಭೇದದ ಕೋತಿಗಳ ಮೇಲೆ ಲಸಿಕೆ ಪ್ರಯೋಗಿಸಿದ್ದು, ಈ ವೇಳೆ ನಿಯಂತ್ರಣ ಲಕ್ಷಣಗಳು ಗೋಚರಿಸಿವೆ. ಲಸಿಕೆಯ ಪರಿಣಾಮದಿಂದ ಕೊರೊನಾ ವೈರಸ್ ಕೋತಿಗಳ ಶ್ವಾಸಕೋಶಕ್ಕೆ ಹಾನಿ ಮಾಡಿಲ್ಲ. ಜೊತೆಗೆ ಯಾವುದೇ ಅಡ್ಡ ಪರಿಣಾಮಗಳು ಗೋಚರಿಸಿಲ್ಲವೆಂದು ಸಂಶೋಧಕರ ತಂಡ ತಿಳಿಸಿದೆ.

ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಮಾನವ ಬಳಕೆಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ವಿಶ್ವದ ಎಲ್ಲ ರಾಷ್ಟ್ರಗಳು ಕೊರೊನಾ ನಿಯಂತ್ರಣಕ್ಕೆ ಲಸಿಕೆ ಕಂಡು ಹಿಡಿಯುವ ಕಾರ್ಯದಲ್ಲಿ ತೊಡಗಿದ್ದು, ಶೀಘ್ರದಲ್ಲೇ ಶುಭ ಸಿಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...