alex Certify ಚಳಿಗಾಲದಲ್ಲಿ ಪುರುಷರು ತಮ್ಮ ತ್ವಚೆ ರಕ್ಷಿಸಲು ಈ ಕ್ರಮಗಳನ್ನು ಪಾಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ಪುರುಷರು ತಮ್ಮ ತ್ವಚೆ ರಕ್ಷಿಸಲು ಈ ಕ್ರಮಗಳನ್ನು ಪಾಲಿಸಿ

ಪುರುಷರು ಒರಟು ತ್ವಚೆಯನ್ನು ಹೊಂದಿರುತ್ತಾರೆ. ಹಾಗಾಗಿ ಅವರು ಚಳಿಗಾಲದಲ್ಲಿ ಚರ್ಮದ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ಪುರುಷರು ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಹಾಗಾಗಿ ಈ ಮನೆಮದ್ದುಗಳನ್ನು ಬಳಸಿ.

*ರೋಸ್ ವಾಟರ್ : ಸೌತೆಕಾಯಿ ರಸದೊಂದಿಗೆ ರೋಸ್ ವಾಟರ್ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಇದರಿಂದ ಎಣ್ಣೆಯಂಶ ಕಡಿಮೆಯಾಗುತ್ತದೆ.

*ತಾಜಾ ಪುದೀನಾ ಎಲೆಗಳ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ನೀರಿನಲ್ಲಿ ವಾಶ್ ಮಾಡಿ. ಇದು ಮೊಡವೆಗಳ ಸಮಸ್ಯೆಯನ್ನು ದೂರಮಾಡುತ್ತದೆ.

*ನೀರಿನಲ್ಲಿ ಬೇವಿನ ಎಲೆಗಳನ್ನು ಹಾಕಿ ಕುದಿಸಿ ರಾತ್ರಿಯಿಡಿ ಇಟ್ಟು ಬೆಳಿಗ್ಗೆ ಮುಖ ತೊಳೆಯಿರಿ. ಇದರಿಂದ ಮುಖದಲ್ಲಿರುವ ಬ್ಯಾಕ್ಟೀರಿಯಾಗಳು ನಿವಾರಣೆಯಾಗುತ್ತದೆ.

* ಮುಖಕ್ಕೆ ಶ್ರೀಗಂಧದ ಪೇಸ್ಟ್ ಮತ್ತು ರೋಸ್ ವಾಟರ್ ಮಿಕ್ಸ್ ಮಾಡಿ ಹಚ್ಚಿ. 20 ನಿಮಿಷ ಬಿಟ್ಟು ವಾಶ್ ಮಾಡಿ.

*ಹಾಗೇ ಪ್ರತಿದಿನ 6ರಿಂದ 8 ಲೋಟ ನೀರು ಕುಡಿಯಿರಿ, ಒಂದು ಲೋಟ ಬೆಚ್ಚಗಿನ ನೀರಿಗೆ ನಿಂಬೆ ರಸ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಪ್ರತಿದಿನ ತಾಜಾ ಹಣ್ಣುಗಳು, ಸಲಾಡ್, ಮೊಳಕೆ ಕಾಳುಗಳು, ಧಾನ್ಯಗಳು ಮತ್ತು ಮೊಸರನ್ನು ಸೇವಿಸಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...