HomeIndiaSHOCKING : ಸ್ನೇಹಿತರ ಮನೆಗೆ ಆಟವಾಡಲು ತೆರಳಿದ್ದ ಬಾಲಕಿ ಲಿಫ್ಟ್‌ನಲ್ಲಿ ಸಿಲುಕಿ ದಾರುಣ ಸಾವು

SHOCKING : ಸ್ನೇಹಿತರ ಮನೆಗೆ ಆಟವಾಡಲು ತೆರಳಿದ್ದ ಬಾಲಕಿ ಲಿಫ್ಟ್‌ನಲ್ಲಿ ಸಿಲುಕಿ ದಾರುಣ ಸಾವು

ಆಟವಾಡಲು ಸ್ನೇಹಿತರ ಮನೆಗೆ ತೆರಳಿದ್ದ 12 ವರ್ಷದ ಬಾಲಕಿ ಲಿಫ್ಟ್‌ನಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಸತ್ತೆನಪಲ್ಲಿ ಪ್ರದೇಶದಲ್ಲಿ ನಡೆದಿದೆ. ಏಕೈಕ ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನೆ ಅಪಘಾತವೇ ಅಥವಾ ಲಿಫ್ಟ್‌ನ ತಾಂತ್ರಿಕ ದೋಷದಿಂದ ಸಂಭವಿಸಿದೆಯೇ ಎಂಬ ಅನುಮಾನಗಳ ನಡುವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೊಸಪೇಟೆಗೆ ಸೇರಿದ ಭವಿರಿಶೆಟ್ಟಿ ಆನಂದ್ ಮಹೇಶ್ ಮತ್ತು ಮಣಿದೀಪಿಕಾ ದಂಪತಿಯ ಏಕೈಕ ಪುತ್ರಿ ರೇವತಿ (12) ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಭಾನುವಾರವಾಗಿದ್ದರಿಂದ ರೇವತಿ ಸಮೀಪದಲ್ಲಿದ್ದ ಸ್ನೇಹಿತರ ಮನೆಗೆ ಆಟವಾಡಲು ತೆರಳಿದ್ದಳು.

ಆ ಮನೆಯ ಮಾಲೀಕ ಕೋಟೇಶ್ವರರಾವ್ ಕುಟುಂಬ ಕೆಲ ದಿನಗಳ ಹಿಂದಷ್ಟೇ ಮೂರು ಅಂತಸ್ತಿನ ಕಟ್ಟಡದಲ್ಲಿ ಹೊಸದಾಗಿ ಲಿಫ್ಟ್ ಅಳವಡಿಸಿತ್ತು. ಮಕ್ಕಳು ಆಟವಾಡುತ್ತಿದ್ದ ವೇಳೆ ಸಂಜೆ ವೇಳೆಯಲ್ಲಿ ರೇವತಿ ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಫ್ಟ್‌ನಿಂದ ಏಕಾಏಕಿ ದೊಡ್ಡ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸುತ್ತಮುತ್ತಲಿನವರು ಆತಂಕಗೊಂಡು ಸ್ಥಳಕ್ಕೆ ಧಾವಿಸಿ ನೋಡಿದಾಗ, ರೇವತಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ಕೂಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.

ಆಟವಾಡಲು ತೆರಳಿದ ಕೆಲವೇ ನಿಮಿಷಗಳಲ್ಲಿ ಏಕೈಕ ಪುತ್ರಿಯನ್ನು ಕಳೆದುಕೊಂಡಿದ್ದರಿಂದ ಪೋಷಕರು ಕಣ್ಣೀರಿನಲ್ಲಿ ಮುಳುಗಿದ್ದಾರೆ. ಆದರೆ ಘಟನೆ ಕುರಿತು ಬಾಲಕಿಯ ಪೋಷಕರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಲಿಫ್ಟ್‌ನ ಬಾಗಿಲುಗಳು ಸರಿಯಾಗಿ ಮುಚ್ಚಿಕೊಳ್ಳುವ ಮೊದಲೇ ಅದು ಮೇಲಕ್ಕೆ ತೆರಳಿದ್ದು, ಪ್ಲಾಸ್ಟಿಕ್ ಶೀಟ್‌ಗಳು ಒಡೆದಿರುವುದು ಸೇರಿದಂತೆ ಹಲವು ಅಂಶಗಳನ್ನು ಅವರು ಪ್ರಶ್ನಿಸಿದ್ದಾರೆ. ಇದು ಕೇವಲ ಅಪಘಾತವಲ್ಲ, ಇದರ ಹಿಂದೆ ಬೇರೆ ಕಾರಣಗಳಿರಬಹುದು ಎಂದು ಆರೋಪಿಸಿದ್ದಾರೆ.

ಪೋಷಕರ ದೂರಿನ ಹಿನ್ನೆಲೆಯಲ್ಲಿ ಸತ್ತೆನಪಲ್ಲಿ ಡಿವೈಎಸ್‌ಪಿ ಚೈತನ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ಆರಂಭಿಸಿದ್ದಾರೆ. ಕಟ್ಟಡದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು, ಲಿಫ್ಟ್‌ನಲ್ಲಿ ತಾಂತ್ರಿಕ ದೋಷ ಅಥವಾ ನಿರ್ವಹಣಾ ಲೋಪವಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಘಟನೆ ಹೇಗೆ ಸಂಭವಿಸಿತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಿ, ವಾಸ್ತವಾಂಶಗಳನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular