HomeLive NewsBREAKING: ಲಿಫ್ಟ್ ನಲ್ಲಿ ಸಿಲುಕಿ ಪರದಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ಎಂಎಲ್ ಸಿ ಚಂದ್ರಪ್ಪ

BREAKING: ಲಿಫ್ಟ್ ನಲ್ಲಿ ಸಿಲುಕಿ ಪರದಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ಎಂಎಲ್ ಸಿ ಚಂದ್ರಪ್ಪ

ಬೀದರ್: ಕೆಲ ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಲಿಫ್ಟ್ ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿತ್ತು. ಇದೀಗ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಲಿಫ್ಟ್ ನಲ್ಲಿ ಸಿಲುಕಿಕೊಂಡು ಪರದಾಡಿದ ಘಟನೆ ನಡೆದಿದೆ.

ಸಚಿವ ಈಶ್ವರ ಖಂಡ್ರೆ ಅವರ ತಂದೆ ಶತಾಯುಷಿ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಲೆಂದು ಬೀದರ್ ಆಸ್ಪತ್ರೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. 102 ವರ್ಷದ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೆಲ ದಿನಗಳಿಂದ ಬೀದರ್ ನ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೀಮಣ್ಣ ಖಂಡ್ರೆ ಭೇತಿಯಾಗಿ ಅವರ ಆರೋಗ್ಯ ವಿಚಾರಿಸಲೆಂದು ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಎಂಎಲ್ ಸಿ ಚಂದ್ರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಲಿಫ್ಟ್ ಹತ್ತಿದಾಗ ಲಿಫ್ಟ್ ಏಕಾಏಕಿ ಕೈಕೊಟ್ಟಿದ್ದರಿಂದ ಲಿಫ್ಟ್ ನಲ್ಲಿ ಸಿಲುಕಿ ಸಚಿವ ಮುನಿಯಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಚಂದ್ರಪ್ಪ ಒದ್ದಾಡಿದ್ದಾರೆ.

ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ಒಳಗೆ ಸಿಲುಕಿಕೊಂಡಿದ್ದಾರೆ. ಬಳಿಕ ಲಿಫ್ಟ್ ರಿಪೇರಿ ಮಾಡಿ ಬಾಗಿಲು ತೆರೆದಾಗ ಸಚಿವರು, ಎಂಎಲ್ ಸಿ ಲಿಫ್ಟ್ ನಿಂದ ಹೊರ ಬಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular