HomeKarnatakaBIG NEWS: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರ ನಿಷೇಧ

BIG NEWS: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಹೈವೇಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಜುಲೈ 13ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ. ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್ ಸೇರಿ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರತಿ ಗಂಟೆಗೆ 80 ರಿಂದ 100 ಕಿಲೋಮೀಟರ್ ಮಾತ್ರ ಚಲಿಸುವಂತೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಹೆಚ್ಚಳ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದ್ದು, ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮೋಟಾರು ವಾಹನ ಕಾಯ್ದೆ ಅನ್ವಯ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular