HomeKarnatakaರಾಜ್ಯದ ಹಲವೆಡೆ ಮಳೆ ಆರ್ಭಟ: ನಾಲ್ವರು ಸಾವು

ರಾಜ್ಯದ ಹಲವೆಡೆ ಮಳೆ ಆರ್ಭಟ: ನಾಲ್ವರು ಸಾವು

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಗುರುವಾರ ಗುಡುಗು ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲು ಬಡಿದು ರಾಕೇಶ್(28) ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಯ ಛಾವಣಿಯ ಕಬ್ಬಿಣದ ರಾಡ್, ತಗಡು ಮತ್ತು ಕಲ್ಲು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ದಡ್ಡಿ ನಾಗಮ್ಮ(48) ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದರ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಶನಿವಾರ ಬೆಳಗ್ಗೆಯೂ ಭದ್ರಾವತಿ, ಶಿವಮೊಗ್ಗ ಸೇರಿ ಹಲವು ಕಡೆ ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular