ರಾಯಚೂರು: ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರುನ ತುಂಗಭದ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಪ್ಪ (42) ಮೃತ ದುರ್ದೈವಿ. ತೆಪ್ಪದಲ್ಲಿ ಮೀನು ಹಿಡಿಯಲೆಂಡು ಹೋಗಿದ್ದ ವೇಳೆ ಈ ದುರಂತ ಸಂಭವಿಸಿದೆ.
ತಕ್ಷಣ ಉಳಿದ ಮೀನುಗಾರರು ದೇವಪ್ಪನ ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಬದುಕಿಸಲು ಸಾಧ್ಯವಾಗಿಲ್ಲ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.