ಕಲಬುರಗಿ: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ.
ನಬಿಲಾಲ್ ಚೌಧರಿ (70) ಮೃತ ದುರ್ದೈವಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.