ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯಿತಿಯ ಮೂಡುವಳ್ಳಿಯಲ್ಲಿ ಸಿಡಿಲು ಬಡಿದ ಪರಿಣಾಮ 93 ಚೀಲ ಅಡಿಕೆ ಸುಟ್ಟು ಕರಕಲಾಗಿವೆ.
ರಜತ್ ಹೆಗ್ಡೆ ಅವರ ಮನೆಯಲ್ಲಿ ಶನಿವಾರ ಘಟನೆ ನಡೆದಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಈ ಭಾಗದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಈ ವೇಳೆ ಮನೆಯ ಒಂದು ಭಾಗದ ಕೊಠಡಿಯಲ್ಲಿ ಇಡಲಾಗಿದ್ದ ಅಡಿಕೆ ಚೀಲಗಳಿಗೆ ಸಿಡಿಲು ಬಡಿದು ಬೆಂಕಿ ತೆಗಲು ಸುಟ್ಟು ಕರಕಲಾಗಿವೆ. ಸಮೀಪದಲ್ಲೇ ಇದ್ದ ಅಡಿಕೆ ಸುಲಿಯುವ ಯಂತ್ರಕ್ಕೂ ಬೆಂಕಿ ತಗುಲಿ ಸುಟ್ಟು ಹೋಗಿದೆ.
ಮಾಹಿತಿ ತಿಳಿದ ಶಾಸಕ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.