ಧಾರವಾಡ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಸಿಡಿಲಬ್ಬರಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಸಾವನ್ನಪ್ಪಿದ್ದಾರೆ. ಮೈಲಾರಪ್ಪ ಉಣಕಲ್ (20) ಮೃತ ಯುವಕ.
ಜಾನುವಾರು ಮೈ ತೊಳೆಯಲು ಹೋಗಿದ್ದಾಗ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.