HomeKarnatakaಮುಂಬೈ ಮಾದರಿಯಲ್ಲಿ ಬೆಂಗಳೂರು ಅಧಿಕಾರವು ಬಿಜೆಪಿಗೆ

ಮುಂಬೈ ಮಾದರಿಯಲ್ಲಿ ಬೆಂಗಳೂರು ಅಧಿಕಾರವು ಬಿಜೆಪಿಗೆ

ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ ಫಲಿತಾಂಶ ಶುಕ್ರವಾರ ಘೋಷಣೆಯಾಗಿದೆ. 227 ಸೀಟುಗಳ ಪಾಲಿಕೆಯಲ್ಲಿ ಬಿಜೆಪಿ ಮೈತ್ರಿಕೂಟ 130 ಸೀಟುಗಳ ಮುನ್ನಡೆ ಪಡೆದಿದ್ದು, ದೇಶದ ವಾಣಿಜ್ಯ ನಗರಿ ಅಧಿಕಾರದ ಚುಕ್ಕಾಣಿ ಬಿಜೆಪಿ ಪಾಲಾಗಲಿದೆ

ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಬಗ್ಗೆ ಕರ್ನಾಟಕದ ವಿವಿಧ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಚುನಾವಣೆ ಫಲಿತಾಂಶ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ನಾಯಕರು ಭರವಸೆ ಹೊಂದಿದ್ದಾರೆ.

ಆರ್.ಅಶೋಕ ಪೋಸ್ಟ್: ಈ ಕುರಿತು ವಿರೋಧ ಪಕ್ಷದ ನಾಯಕ ಆರ್.ಅಶೋಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಬಿಜೆಪಿಗೆ ಜೈ ಎಂದ ಮುಂಬೈ ಜನತೆ! ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನ ನಂತರ ಈಗ ಮಹಾರಾಷ್ಟ್ರದ ಪ್ರತಿಷ್ಠಿತ ಬಿಎಂಸಿ (BMC) ಸೇರಿದಂತೆ ಪುಣೆ, ನಾಗಪುರ ಹಾಗೂ ರಾಜ್ಯದ ಎಲ್ಲಾ ಪ್ರಮುಖ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ ಬಣ) ಮೈತ್ರಿಕೂಟ ಮತ್ತೊಮ್ಮೆ ಅಭೂತಪೂರ್ವ ಜಯಭೇರಿ ಬಾರಿಸಿದ್ದು ಇದು ಜನತೆ ಮತ್ತೊಮ್ಮೆ ಬಿಜೆಪಿಯ ಅಭಿವೃದ್ಧಿ ರಾಜಕಾರಣಕ್ಕೆ ಮನ್ನಣೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಈ ಐತಿಹಾಸಿಕ ವಿಜಯದ ರೂವಾರಿಗಳಾದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ, ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರಿಗೆ, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ, ಉಪಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರಿಗೆ ಮತ್ತು ಮಹಾರಾಷ್ಟ್ರ ಬಿಜೆಪಿಯ ಎಲ್ಲ ಕಾರ್ಯಕರ್ತರಿಗೆ ಹೃತ್ಪೂರ್ವಕ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

‘ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಸಹ ಬೆಂಗಳೂರಿನ ಮಹಾ ಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಆಶೀರ್ವಾದ ಮಾಡಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷದ ಪತನದ ಹಾದಿ ಆರಂಭವಾಗುವುದು ನಿಶ್ಚಿತ’ ಎಂದು ಅಶೋಕ ಭರವಸೆ ವ್ಯಕ್ತಪಡಿಸಿದ್ದಾರೆ.

ಮುಂಬೈ ಫಲತಾಂಶ: 227 ಸದಸ್ಯ ಬಲದ ಬೃಹನ್‌ ಮುಂಬೈ ಮಹಾನಗರ ಪಾಲಿಕೆಗೆ (ಬಿಎಂಸಿ) ಗುರುವಾರ ಮತದಾನ ನಡೆದಿತ್ತು. ಶುಕ್ರವಾರ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಮತ್ತು ಶಿವಸೇನೆ (ಏಕನಾಥ್ ಶಿಂಧೆ) ಮೈತ್ರಿಕೂಟವು ಮುನ್ನಡೆಯಲ್ಲಿದೆ.

ಸದ್ಯದ ಮಾಹಿತಿಯಂತೆ ಬಿಜೆಪಿ ಮೈತ್ರಿಕೂಟ 130, ಕಾಂಗ್ರೆಸ್ ಮೈತ್ರಿಕೂಟ 14, ಶಿವಸೇನೆ (ಉದ್ಭವ್ ಮತ್ತು ರಾಜ್ ಠಾಕ್ರೆ) 72, ಎನ್‌ಸಿಪಿ (ಅಜಿತ್ ಪವಾರ್) 2 ಮತ್ತು ಇತರರು 9 ಸೀಟುಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಮ್ಯಾಜಿಕ್ ನಂಬರ್ 114.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular