HomeKarnatakaಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌.

ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 ಗೇಟ್ ಗಳ ಮೂಲಕ ನೀರು ಹರಿಸಲಾಗಿದೆ‌. 1819 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯ ಈಗಾಗಲೇ 1814 ಅಡಿ ಭರ್ತಿಯಾಗಿದ್ದು, ಒಳ ಅರಿವು 5361 ಕ್ಯೂಸೆಕ್ ಇರುವ ಹಿನ್ನೆಲೆಯಲ್ಲಿ ನೀರಾವರಿ ಅಧಿಕಾರಿಗಳು ನೀರು ಹರಿಸಿದ್ದಾರೆ‌.

ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಶಾಸಕರಾದ ಬೇಳೂರು ಗೋಪಾಲಕೃಷ್ಣ ಗೇಟ್ ಗಳಿಗೆ ಪೂಜೆ ಸಲ್ಲಿಸಿ ನೀರು ಬಿಡುಗಡೆಗೆ ಚಾಲನೆ ನೀಡಿದ್ದಾರೆ‌. ಈ ಸಂದರ್ಭದಲ್ಲಿ ಕೆಪಿಸಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಟ್ಟಿರುವುದರಿಂದ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತ ಮೈದುಂಬಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular