HomeLatest NewsBreaking: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

Breaking: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ ನಿಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಮಂಗಳವಾರ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಟಿಕೆಟ್ ಆಕಾಂಕ್ಷಿಯಾಗಿದ್ದ ಲಿಂಗರಾಜ್ ಪಾಟೀಲ್‌ಗೆ ಟಿಕೆಟ್ ಕೈ ತಪ್ಪಿ ನಿರಾಸೆಯಾಗಿತ್ತು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಲಿಂಗರಾಜ್ ಪಾಟೀಲ್, “ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಬಿಜೆಪಿ ಮಂಗಳವಾರ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್‌ಗೆ ಲಿಂಗರಾಜ್ ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಎಸ್.ವಿ.ಸಂಕನೂರ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ನಾನು ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಲಾಗಿದೆ. ಇದರಿಂದ ನೋವಾಗಿದೆ, ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ” ಎಂದು ಲಿಂಗರಾಜ್ ಪಾಟೀಲ್ ಹೇಳಿದ್ದಾರೆ.

ಲಿಂಗರಾಜ್ ಪಾಟೀಲ್ ರಾಜೀನಾಮೆ ಪತ್ರ: ಲಿಂಗರಾಜ್ ಪಾಟೀಲ್ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರವನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಜೀನಾಮೆಗೆ ಕಾರಣವನ್ನು ವಿವರಿಸಿದ್ದಾರೆ.

ಮಾನ್ಯ ಶ್ರೀ ಬಿ. ವೈ. ವಿಜಯೇಂದ್ರ
ರಾಜ್ಯಾಧ್ಯಕ್ಷರು
ಭಾರತೀಯ ಜನತಾ ಪಾರ್ಟಿ, ಕರ್ನಾಟಕ

ಮಾನ್ಯ ಅಧ್ಯಕ್ಷರೇ,

ವಿಷಯ: ರಾಜ್ಯ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆ ಸಲ್ಲಿಸುವ ಕುರಿತು.

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ನಾನು ಲಿಂಗರಾಜ ಪಾಟೀಲ ಕಳೆದ 37 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ನೀಡಿದ ಪ್ರತಿಯೊಂದು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಪಕ್ಷದ ಬೆಳವಣಿಗೆಗೆ ನನ್ನದೇ ಆದ ಕೊಡುಗೆ ನೀಡಿದ್ದೇನೆ. ನನ್ನ ಪಕ್ಷದ ಸೇವೆಗೆ ರಾಜ್ಯದ ಅನೇಕ ಕಾರ್ಯಕರ್ತರು ಸಾಕ್ಷಿಯಾಗಿದ್ದಾರೆ.

ನನ್ನ ಈ ದೀರ್ಘಕಾಲದ ಸೇವೆಯನ್ನು ಪರಿಗಣಿಸಿ, ಪಕ್ಷವು ನನಗೆ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಲು ಒಂದು ಅವಕಾಶವನ್ನು ಖಂಡಿತವಾಗಿ ನೀಡುತ್ತದೆ ಎಂಬ ವಿಶ್ವಾಸ ನನ್ನಲ್ಲಿತ್ತು. ಆದರೆ, ಕಳೆದ ಹಲವು ವರ್ಷಗಳಿಂದ ನಾನು ಸಲ್ಲಿಸಿರುವ ಪ್ರಾಮಾಣಿಕ ಸೇವೆಯನ್ನು ಪರಿಗಣಿಸದೇ ಇರುವುದು ನನಗೆ ಮಾತ್ರವಲ್ಲದೆ, ರಾಜ್ಯದ ಎಲ್ಲಾ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯ ಹಾಗೂ ನೋವುಂಟು ಮಾಡಿದ ಸಂಗತಿಯಾಗಿದೆ.

ಆದ್ದರಿಂದ, ನಾನು ಪ್ರಸ್ತುತ ವಹಿಸಿರುವ ರಾಜ್ಯ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಲು ವಿನಂತಿಸುತ್ತೇನೆ.

ಇಲ್ಲಿವರೆಗೆ ತಾವು ನೀಡಿದ ಸಹಕಾರಕ್ಕೆ ಹೃತ್ತೂರ್ವಕ ಧನ್ಯವಾದಗಳು  ಎಂದು ಪತ್ರದಲ್ಲಿ ಹೇಳಿದ್ದಾರೆ.

ಲಿಂಗರಾಜ್ ಪಾಟೀಲ್ ಮಾತನಾಡಿ, “ಈಗಲೂ ಕಾಲ ಮಿಂಚಿಲ್ಲ. ನನಗೆ ಟಿಕೆಟ್ ಸಿಗುವ ಭರವಸೆ ಇದೆ. 8 ದಿನಗಳವರೆಗೆ ಕಾದು ನೋಡುತ್ತೇನೆ. ಅವಕಾಶ ಸಿಗದಿದ್ದರೆ ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular