HomeKarnatakaರೇಷ್ಮೆ ಇಲಾಖೆ ತಾಲೂಕು ಕಚೇರಿಯಲ್ಲಿ ಭೀಕರ ಬೆಂಕಿ ಅವಘಡ: ದಾಖಲೆಗಳು, ವಸ್ತುಗಳು ಸುಟ್ಟು ಭಸ್ಮ

ರೇಷ್ಮೆ ಇಲಾಖೆ ತಾಲೂಕು ಕಚೇರಿಯಲ್ಲಿ ಭೀಕರ ಬೆಂಕಿ ಅವಘಡ: ದಾಖಲೆಗಳು, ವಸ್ತುಗಳು ಸುಟ್ಟು ಭಸ್ಮ

ರಾಯಚೂರು: ರೇಷ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಚೇರಿಯಲ್ಲಿದ್ದ ದಾಖಲೆಗಳು, ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಗಹ್ಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ.

ಇಂದು ಬೆಳಗ್ಗೆ ರೇಶ್ಮೆ ಇಲಾಖೆಯ ತಾಲೂಕು ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಾಲ್ಕನೇ ಶನಿವಾರ ಸರ್ಕಾರಿ ರಜಾ ದಿನ ಹಿನ್ನೆಲೆಯಲ್ಲಿ ಕಚೇರಿಗೆ ಬೀಗ ಹಾಕಲಾಗಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಕಚೇರಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಪೀಠೋಪಕರಣಗಳು, ಕಂಪ್ಯೂಟರ್‌ಗಳು, ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular