HomeLatest Newsಮತಗಳ್ಳತನ ಗೊಂದಲಕ್ಕೆ ತೆರೆ ಎಳೆಯಲು ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಲಿ: HDK

ಮತಗಳ್ಳತನ ಗೊಂದಲಕ್ಕೆ ತೆರೆ ಎಳೆಯಲು ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಲಿ: HDK

ಬೆಂಗಳೂರು: ಮತಗಳ್ಳತನ ಗೊಂದಲಕ್ಕೆ ತೆರೆ ಎಳೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಹೇಳಿದ್ದಾರೆ.

ಮತಗಳ್ಳತನ ಎನ್ನುವುದು ಕೆಲವರ ಕಪಟ ಕಥೆಯಾಗಿದೆ. ಹಾಗಾಗಿ ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು. ಚುನಾವಣಾ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ಹುನ್ನಾರವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರವೂ ಇದಾಗಿದೆ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪ ಹೊರಿಸಿ ಅನುಮಾನದಿಂದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ ಇದಾಗಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೊಬೆಲ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಹೆಚ್.ಡಿ.ಕೆ. ದೂರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular