ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹರಿಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಲಿಂಕ್ ಬಿಡುಗಡೆ ಮಾಡಿದ್ದು, ಡಿ.19 ಕೊನೆ ದಿನವಾಗಿದೆ.
ಡಿ.20ರಂದು ಸಂಜೆ 4ರ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುತ್ತದೆ. ಡಿ.22ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಡಿ.26ರವರೆಗೆ ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಡಿ.28 ಕೊನೆ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

