ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ: 99 ರೂ.ಗೆ ಎಲ್ಲಾ ಬ್ರ್ಯಾಂಡ್ 180 ml ಮದ್ಯ: ಅ. 1 ರಿಂದಲೇ ಜಾರಿ

ಎಲ್ಲಾ ಬ್ರ್ಯಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 ರೂ. ಗರಿಷ್ಠ ದರ ನಿಗದಿಪಡಿಸಲಾಗಿದೆ. ಹೊಸ ಮದ್ಯದ ನೀತಿ ಜಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆ ಅನುಮೋದನೆ ನೀಡಿದೆ.

ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಕೈಗೆಟುಕುವ ಮದ್ಯ ದರ ಪರಿಚಯಿಸಲಾಗಿದೆ. ಎಲ್ಲಾ ಬ್ರ್ಯಾಂಡ್  ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 ರೂಪಾಯಿ ಗರಿಷ್ಠ ದರ ನಿಗದಿಪಡಿಸಲಾಗಿದೆ.

ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಮದ್ಯ ಸಿಗಬೇಕು ಎನ್ನುವ ಉದ್ದೇಶದಿಂದ ನೂತನ ಮದ್ಯ ನೀತಿ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಆಂಧ್ರಪ್ರದೇಶದಲ್ಲಿರುವ 3736 ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಲ್ಲಿ ಶೇಕಡ 10ರಷ್ಟು ಕಳ್ಳು ತೆಗೆಯುವ ಸಮುದಾಯದವರಿಗೆ ನೀಡಲಾಗುವುದು. ಆನ್ಲೈನ್ ಲಾಟರಿ ವ್ಯವಸ್ಥೆ ಮೂಲಕ ಇವುಗಳನ್ನು ಹಂಚಿಕೆ ಮಾಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read