HomeKarnatakaಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್: 4 ದಿನ ಮದ್ಯ ಸ್ಥಗಿತ ಹಿನ್ನಲೆ ಭಾರಿ ಬೇಡಿಕೆ

ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್: 4 ದಿನ ಮದ್ಯ ಸ್ಥಗಿತ ಹಿನ್ನಲೆ ಭಾರಿ ಬೇಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ ಖರೀದಿ ಭರಾಟೆ ಜೋರಾಗಿತ್ತು. ಹಲವೆಡೆ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಲಾಗಿದೆ ಎಂದು ಹೇಳಲಾಗಿದೆ.

ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಗೆ ನಿಷೇಧ ಹೇರಲಾಗಿದೆ. ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮೊದಲ ಅವಧಿಯಲ್ಲಿ ಅಂದರೆ ಮೇ 8ರಂದು ಸಂಜೆ 5 ಗಂಟೆಯಿಂದ ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ, ಪೂರೈಕೆ ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿದ್ದು, ಮೇ 13 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಧ್ಯದ ಅಂಗಡಿ ಬಂದ್ ಆಗಲಿವೆ. 4 ದಿನ ಮದ್ಯ ದಾಸ್ತಾನು ಮಾಡಲು ಕಡಿವಾಣ ಹಾಕುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular