HomeKarnatakaಮದ್ಯ ಪ್ರಿಯರಿಗೆ ಶಾಕ್: ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ಬಂದ್

ಮದ್ಯ ಪ್ರಿಯರಿಗೆ ಶಾಕ್: ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ಬಂದ್

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ 6 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣಾ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಜೂನ್ 1ರಿಂದ ಜೂನ್ 6ವರೆಗೆ ಮದ್ಯ ಮಾರಾಟ ಬಂದ್ ಆಗಲಿದೆ. ಜೂನ್ 2 ಹಾಗೂ ಜೂನ್ 4 ಹಾಗೂ ಜೂನ್ 6ರಂದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂ 1 ಹಾಗೂ ಜೂನ್ 3ರದು ಮಧ್ಯ ಮಾರಾಟ ಭಾಗಶಃ ಬಂದ್ ಆಗಲಿದೆ.

ರಾಜ್ಯದಲ್ಲಿ ಲೋಕಸಭ ಅಚುನಾವಣೆಗೆ ಏಪ್ರಿಲ್ 24 ರಿಂದ 26ವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಈಗ ಮತ್ತೆ ಮಧ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಇದರಿಂದ ವಹಿವಾಟಿನ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯಮಾರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ಸಂಜೆಯಿಂದಲೇ ಮದ್ಯ ಮಾರಾಟ ನಿಷೇಧ ಆರಂಭವಾಗುವುದರಿಂದ ವೀಕೆಂಡ್ ಕಾರ್ಪರೇಟ್ ಪಾರ್ಟಿಗಳಿಗೆ ಮಧ್ಯ ಪೂರೈಕೆ ಸಾಧ್ಯವಿಲ್ಲ. ಹೀಗಾಗಿ ಪ್ರತಿ ದಿನ 30 ಲಕ್ಷ ರೂಪಾಯಿಗೂ ಅಧಿಕ ನಷ್ಟವುಂಟಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular