HomeKarnatakaಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ದುಬಾರಿ ಮದ್ಯಗಳ ದರ ಆಗಸ್ಟ್ 27 ರಿಂದಲೇ ಶೇಕಡ 15 ರಿಂದ 20 ರಷ್ಟು ಇಳಿಕೆಯಾಗಲಿದೆ.

ಆದರೆ ಅಗ್ಗದ ಮದ್ಯಗಳ ದರ ಏರಿಕೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ನೆರೆಯ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮೊದಲಾದ ರಾಜ್ಯಗಳಲ್ಲಿ ದುಬಾರಿ ಬೆಲೆಯ ಮದ್ಯಗಳ ದರ ಕಡಿಮೆ ಇದೆ. ಕರ್ನಾಟಕದಲ್ಲಿ ದರ ಹೆಚ್ಚಾಗಿರುವುದರಿಂದ ಗಡಿಭಾಗದ ಜನ ಪಕ್ಕದ ರಾಜ್ಯಗಳಲ್ಲಿ ಮದ್ಯ ಖರೀದಿಸುತ್ತಿದ್ದಾರೆ. ಹೀಗಾಗಿ ನೆರೆ ರಾಜ್ಯಗಳ ಬೆಲೆ ನೋಡಿಕೊಂಡು ಸರ್ಕಾರ ದರ ಪರಿಷ್ಕರಣೆಗೆ ಮುಂದಾಗಿದ್ದು, ಬಜೆಟ್ ನಲ್ಲಿ ಸಿಎಂ ಈ ಬಗ್ಗೆ ಘೋಷಣೆ ಮಾಡಿದ್ದರು.

ಎರಡು ತಿಂಗಳ ಹಿಂದೆಯೇ ದರ ಪರಿಷ್ಕರಣೆ ಜಾರಿ ಆಗಬೇಕಿತ್ತು. ಆದರೆ, ಒಪ್ಪಿಗೆ ದೊರೆತಿರಲಿಲ್ಲ. ಈಗ ಒಪ್ಪಿಗೆ ನೀಡಿದ್ದು, ಇಂದಿನಿಂದ ದುಬಾರಿ ಮದ್ಯಗಳ ದರ ಶೇಕಡ 15 ರಿಂದ 20 ರಷ್ಟು ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular