
ಹೌದು, ಮದ್ಯದ ದರದಲ್ಲಿ ಪ್ರತಿ ಬಾಟಲ್ ಗೆ ರೂ 10 ರಿಂದ 20 ರೂ. ವರೆಗೆ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಬಿಯರ್ ಸೇರಿದಂತೆ ಹಾಟ್ ಡ್ರಿಂಕ್ಸ್ (Hot drinks)ಗಳ ಬೆಲೆ ಹೆಚ್ಚಳವಾಗಲಿದೆ. ಮದ್ಯ ಮಾರಾಟದಿಂದಲೇ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯ ಬರುತ್ತಿದ್ದು, ಈ ಹಿನ್ನೆಲೆ ಗ್ಯಾರಂಟಿ ಯೋಜನೆಗಳ (Guarantee Schemes) ಜಾರಿ ಬೆನ್ನಲ್ಲೇ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಕಿಂಗ್ ಫಿಷರ್ ಬಿಯರ್ (Beer) ದರ ರೂ 160 ರಿಂದ 170 ಕ್ಕೆ ಏರಿಕೆ ಮಾಡಲಾಗಿದೆ. ಯುಬಿ ಪ್ರೀಮಿಯಂ ದರ 125 ರಿಂದ 135 ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಎಣ್ಣೆ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

