HomeLatest Newsನೂತನ ಅಬಕಾರಿ ನೀತಿ ಜಾರಿ: ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬಿಯರ್, ವಿಸ್ಕಿ ದರದಲ್ಲಿ ಭಾರಿ...

ನೂತನ ಅಬಕಾರಿ ನೀತಿ ಜಾರಿ: ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಬಿಯರ್, ವಿಸ್ಕಿ ದರದಲ್ಲಿ ಭಾರಿ ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ಅಬಕಾರಿ ನೀತಿ ಜಾರಿಗೆ ತಂದಿದ್ದು, ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿ ಜಾರಿಗೆ ಬಂದಿದೆ. ಇದರಿಂದಾಗಿ ಬೀಯರ್ ಹಾಗೂ ವಿಸ್ಕಿ ದರದಲ್ಲಿ ಭಾರಿ ಇಳಿಕೆಯಾಗಿದೆ.

ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ.

ಹೊಸ ಅಬಕಾರಿ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಶೇ 20 ರಿಂದ 25 ರಷ್ಟು ಇಳಿಕೆಯಾಗಿದೆ. ಕಿಂಗ್‌ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ. ಇಳಿಕೆಯಾಗಿದೆ. ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್‌ಪೋರ್ಟ್ ಮೇಲೆ 25 ರೂ. ಹಾಗೂ ಬಡ್‌ವೈಸರ್ ಪ್ರೀಮಿಯಂ ಮೇಲೆ 20 ರೂ.ಗಳವರೆಗೆ ರಿಯಾಯಿತಿ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದೇಶಿ ಬ್ರಾಂಡ್‌ನ ಸ್ಕಾಚ್ ವಿಸ್ಕಿಗಳ ಬೆಲೆಯೂ ಶೇ. 20 ರಷ್ಟು ಕಡಿಮೆಯಾಗಿದೆ. ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್‌ನ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ 4,100 ರೂ.ಗೆ ಇಳಿದಿದೆ. ಇದು ಶ್ರೀಮಂತ ವರ್ಗದ ಮದ್ಯಪ್ರಿಯರಿಗೆ ಖುಷಿತಂದಿದೆ.

ಕರ್ನಾಟಕ ದೇಶದಲ್ಲೇ ಮೊದಲ ಬಾರಿಗೆ ಈ ಅಬಕಾರಿ ನೀತಿ (AiB) ತೆರಿಗೆ ನೀತಿಯನ್ನು ಜಾರಿಗೆ ತಂದಿದೆ. ಈ ಹಿಂದೆ ಇದ್ದ 16 ತೆರಿಗೆ ಸ್ಲ್ಯಾಬ್‌ಗಳನ್ನು ಈಗ 8ಕ್ಕೆ ಇಳಿಸಲಾಗಿದೆ. ಅರವತ್ತು ವರ್ಷಗಳ ಹಳೆಯ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ನಿರ್ಧರಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular